ಕೋಲಾರ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆತಲೆಕೊಟ್ಟುಆತ್ಮಹತ್ಯೆ ಮಾಡಿಕೊಂಡಿರುವಘಟನೆಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಮಾಲೂರುತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಶೆಟ್ಟಹಳ್ಳಿ ಗ್ರಾಮದ ಸತೀಶ್ (೧೮) ಹಾಗೂ ಅಪ್ರಾಪ್ತೆ ಮೃತಪಟ್ಟಿದ್ದಾರೆ. ಇವರಿಬ್ಬರ ಪ್ರೀತಿಗೆ ೨ ಮನೆಯವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಬೈಕ್ ನಿಲ್ಲಿಸಿ, ಕೋಲಾರದಿಂದ ಬೆಂಗಳೂರಿಗೆ ತೆರಳುವ ರೈಲಿಗೆತಲೆಕೊಟ್ಟಿದ್ದಾರೆ. ರೈಲಿನಡಿ ಸಿಲುಕಿದ ದೇಹಗಳು ಛಿದ್ರಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಕಂಟೋನ್ಮೆAಟ್ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.