ಬೆಂಗಳೂರು: ಧರ್ಮಸ್ಥಳ ಪ್ರಕರಣದ ಸಂಬAಧ ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡಿದ್ದಕ್ಕೆ ತೀವ್ರ ಪಶ್ಚಾತ್ತಾಪವಿದೆ ಎಂದು ಸುಜಾತ್ ಭಟ್ ಹೇಳಿದ್ದಾರೆ.
ಈ ಸಂಬAಧ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರದ್ದೋ ಮಾತು ಕೇಳಿ ತಮ್ಮ ಜೀವನ ಹಾಳು ಮಾಡಿಕೊಳ್ಳಲು ಇಚ್ಛಿಸುವುದಿಲ್ಲ ಎಂದಿದ್ದಾರೆ. ಮುಂದಿನ ವಾರ ಧರ್ಮಸ್ಥಳಕ್ಕೆ ತೆರಳಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆ ಯಾಚಿಸುವುದಾಗಿ ಭಟ್ ತಿಳಿಸಿದ್ದಾರೆ.
ತಮ್ಮ ೬೦ ವರ್ಷಗಳ ಜೀವನದಲ್ಲಿ ಇದುವರೆಗೆ ಯಾವುದೇ ಕಪುö್ಪ ಚುಕ್ಕೆ ಬಂದಿರಲಿಲ್ಲ, ಆದರೆ ಬುರುಡೆ ಗ್ಯಾಂಗ್ ಜೊತೆಗಿನ ಸಹವಾಸದಿಂದ ತಮಗೆ ದೊಡ್ಡ ಪಶ್ಚಾತ್ತಾಪವಾಗಿದೆ ಎಂದಿದ್ದಾರೆ. ಈ ವಿಚಾರದಲ್ಲಿ ತಮ್ಮೊಂದಿಗೆ ಇದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮಟ್ಟಣ್ಣವರ್ ಸೇರಿದಂತೆ ಯಾರೂ ಈಗ ತಮ್ಮ ಸಂಪರ್ಕದಲ್ಲಿಲ್ಲ ಎಂದು ಸುಜಾತಾ ಭಟ್ ಸ್ಪಷ್ಟಪಡಿಸಿದ್ದಾರೆ. ವೈಯಕ್ತಿಕ ಜೀವನದ ಮೇಲೆ ಇದು ಪರಿಣಾಮ ಬೀರಿದ್ದು, ತಮ್ಮ ಪಾಡಿಗೆ ತಾವು ಬದುಕಲುಬಯಸುವುದಾಗಿ ತಿಳಿಸಿದ್ದಾರೆ. ಬಿಗ್ಬಾಸ್ಗೆ ಆಹ್ವಾನ ದೊರೆತರೆ ಭಾಗವಹಿಸಲು ಸಿದ್ಧರಿರುವುದಾಗಿಯೂ ಅವರು ಹೇಳಿದ್ದಾg