ನವದೆಹಲಿ: ಪತಂಜಲಿ ಆಯುರ್ವೇದದ `ದಾರಿತಪ್ಪಿಸುವ ಜಾಹೀರಾತುಗಳಿಗೆ’ ಸಂಬಂಧಿಸಿದಂತೆ ಎರಡು ವಾರಗಳ ಅವಧಿಯಲ್ಲಿ ವೈಯಕ್ತಿಕವಾಗಿ ಹಾಜರಾಗುವಂತೆ ಯೋಗ ಗುರು ರಾಮ್ದೇವ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.
ಪತಂಜಲಿ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪತಂಜಲಿ ತನ್ನ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವವನ್ನು ಪ್ರತಿಪಾದಿಸುವ ಹೇಳಿಕೆಗಳ ಬಗ್ಗೆ ನ್ಯಾಯಾಲಯದಲ್ಲಿ ನೀಡಿದ ಭರವಸೆಯನ್ನು ಮೇಲ್ನೋಟಕ್ಕೆ ಉಲ್ಲಂಘಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಪತಂಜಲಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಏಕೆ ಪ್ರಾರಂಭಿಸಬಾರದು ಎಂದು ನ್ಯಾಯಾಲಯವು ಪತಂಜಲಿಗೆ ನೋಟಿಸ್ ನೀಡಿತ್ತು.