ಮಾಗಡಿ: ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಾಂಕ 05:02:24 ರ ಮಂಗಳವಾರದಂದು ಸಂಸದರಾದ ಡಿ.ಕೆ.ಸುರೇಶ್ ಕೆ.ಆರ್.ಡಿ.ಸಿ.ಎಲ್.ನಿಗಮ ಮಂಡಳಿ ಅದ್ಯಕ್ಷರು ಹಾಗೂ ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಮಣಿಗನಹಳ್ಳಿ ಸುರೇಶ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳವಾರ ಬೆಳಗ್ಗೆ 10 ಗಂಟೆಗೆ ಕುದೂರು ಪಟ್ಟಣದಲ್ಲಿ ಶ್ರೀ ರಾಮಲೀಲಾ ಹೈಟೆಕ್ ಆಟದ ಮೈದಾನ ಸುಮಾರು 6 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ, 10:30 ಕ್ಕೆ ಕೆಂಚನಹಳ್ಳಿ ಶ್ರೀ ಲಕ್ಷ್ಮೀದೇವಿ ಮುಂಭಾಗದಲ್ಲಿ ಕಾಂಕ್ರೀಟ್ ರಸ್ತೆಗೆ 50 ಲಕ್ಷ, 11 ಗಂಟೆಗೆ ಮಾಗಡಿ ಪಟ್ಟಣದ ಕೆಂಪೇಗೌಡ ಬಯಲು ರಂಗಮಂದಿರ ನಿರ್ಮಾಣಕ್ಕೆ 50 ಲಕ್ಷ ವೆಚ್ಚದಲ್ಲಿ ಶಂಕುಸ್ಥಾಪನೆ ಪೂಜೆ,
ಬೆಳಗ್ಗೆ 11:30 ಕ್ಕೆ ಪಟ್ಟಣದಲ್ಲಿ ಗುರುಭವನ ನಿರ್ಮಾಣಕ್ಕೆ 5 ಕೋಟಿ ವೆಚ್ಚದಲ್ಲಿ ಶಂಕುಸ್ಥಾಪನೆ, ಮಧ್ಯಾಹ್ನ 12 ಗಂಟೆಗೆ ಪಟ್ಟಣದ ತಟವಾಳ್ ರಸ್ತೆಯಲ್ಲಿ ನಿರ್ಮಾಣವಾಗಿರುವ ವಿದ್ಯುತ್ ಚಿತಾಗಾರ ಉದ್ಘಾಟನೆ, 12:30 ಕ್ಕೆ ಸೀಗೇಕುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿರುವ ವಸತಿ ರಹಿತ ಕುಟುಂಬಗಳಿಗೆ ಕಲ್ಲುದೇವನಹಳ್ಳಿಯಲ್ಲಿ ಬಡಾವಣೆ ನಿರ್ಮಿಸಿ ನಿವೇಶನ ಹಂಚಿಕೆ ಮಾಡಲು ಚಾಲನೆ, ಮಧ್ಯಾಹ್ನ 1 ಗಂಟೆಗೆ ಅಕ್ಕೂರು ಬೆಳಗವಾಡಿ ಸಂಪರ್ಕ ರಸ್ತೆಗೆ ಸುಮಾರು 3 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಸಂಸದರಾದ ಡಿ.ಕೆ.ಸುರೇಶ್ ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಚಾಲನೆ ನೀಡಲಿದ್ದಾರೆ.ಹಾಲಿ ಮಾಜಿ ಜನಪ್ರತಿನಿಧಿಗಳು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸುರೇಶ್ ತಮ್ಮ ಮನವಿಯಲ್ಲಿ ತಿಳಿಸಿದರು.