ಹೊಸದಿಲ್ಲಿ: ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ನಂಬರ್ ವನ್ ಟಿ20 ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಐಪಿಎಲ್ನ ಇನ್ನೂ ಕೆಲವು ಪಂದ್ಯಗಳಲ್ಲಿ ಆಡುವುದಿಲ್ಲ. ಕ್ರೀಡಾ ಅಂಡವಾಯು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸೂರ್ಯ ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ.
ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ, ವ್ಯಾಯಾಮ ನಡೆಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಸೂರ್ಯ ಎನ್ಸಿಎಯಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಿದ್ದಾರೆ.
ಅವರು ಶೀಘ್ರ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಕ್ರಿಕೆಟ್ ಮಂಡಳಿಯ ಮೂಲಗಳು ತಿಳಿಸಿವೆ. ಮುಂಬೈ ತಂಡವು ಈ ಬಾರಿಯ ಲೀಗ್ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಸೋತು ನಿರಾಶೆ ಅನುಭವಿಸಿದೆ. ಮುಂದಿನ ಸೋಮವಾರ ಮುಂಬೈ ತಂಡವು ಮುಂಬಯಿಯಲ್ಲಿಯೇ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.