ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿಯ ಐಪಿಎಲ್ ಆಡಲು ಸೂರ್ಯನಿಗೆ ಇನ್ನೂ ಸಹ ಕ್ಲಿಯರೆನ್ಸ್ ನೀಡಲಾಗಿಲ್ಲ.
ಬಿಸಿಸಿಐ ನಿಯಮದ ಪ್ರಕಾರ, ಟೀಮ್ ಇಂಡಿಯಾ ಆಟಗಾರರು ಗಾಯಗೊಂಡ ಬಳಿಕ ಐಪಿಎಲ್ ಆಡಬೇಕಿದ್ದರೆ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಪ್ರಮಾಣಪತ್ರವನ್ನು ಪಡೆಯಬೇಕು. ಅದರಂತೆ ಇದೀಗ ಫಿಟ್ನೆಸ್ ಟೆಸ್ಟ್ನಲ್ಲಿ ಭಾಗವಹಿಸಿರುವ ಸೂರ್ಯ ಮೊದಲ ಅವಕಾಶದಲ್ಲಿ ವಿಫಲರಾಗಿದ್ದಾರೆ.
ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರು. ಆ ಬಳಿಕ ಸರ್ಜರಿಗೆ ಒಳಗಾಗಿದ್ದ ಸೂರ್ಯ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ತಿಂಗಳುಗಳ ಬಳಿಕ ಕಂಬ್ಯಾಕ್ ಮಾಡಲು ಸಜ್ಜಾಗಿರುವ ಯಾದವ್ ಎನ್ಸಿಎ ನಲ್ಲಿ ಫಿಟ್ನೆಸ್ ಟೆಸ್ಟ್ಗೆ ಒಳಗಾಗಿದ್ದಾರೆ.