ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ರಾಯ್ ಪುರ್ ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್ ಸಿಬಿ 20ನೇ ಓವರ್ ನ ಕೊನೆಯ ಎಸೆತದಲ್ಲಿ ಚೇಸ್ ಮಾಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್, ನಮ್ಮ ಸೋಲಿಗೆ ಬ್ಯಾಟಿಂಗ್ ವಿಭಾಗದ ಹಿನ್ನಡೆಯೇ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
“ನಮ್ಮ ಸ್ಕೋರ್ನಲ್ಲಿ 10 ರಿಂದ 15 ರನ್ ಕಡಿಮೆಯಾದವು ಎಂದು ನನಗೆ ಅನ್ನಿಸಿತು. ಸರಿಯಾದ ಸಮಯದಲ್ಲಿ ವಿಕೆಟ್ಗಳನ್ನು ಕಳೆದುಕೊಂಡಿದ್ದು ನಮಗೆ ಹೊಡೆತ ನೀಡಿತು. ಆದರೆ ನಮನ್ ಧೀರ್ ಮತ್ತು ತಿಲಕ್ ವರ್ಮಾ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರು ಈ ಪಿಚ್ನಲ್ಲಿ ಆಡಿದ ರೀತಿ ನೋಡಿದರೆ, ಅವರು ಬೇರೆಯದೇ ಟ್ರಾ÷್ಯಕ್ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆನೋ ಎಂಬಂತಿತ್ತು,” ಎಂದು ಸೂರ್ಯಕುಮಾರ್ ಯಾದವ್ ಯುವ ಬ್ಯಾಟರ್ಗಳನ್ನು ಶ್ಲಾಘಿಸಿದರು.
ಇನ್ನು ಪಂದ್ಯದ ಕೊನೆಯ ಓವರ್ನಲ್ಲಿ 15 ರನ್ಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ಯುವ ಆಲ್ ರೌಂಡರ್ ರಾಜ್ ಬಾವಾಗೆ ನೀಡಲಾಗಿತ್ತು. ಈ ಬಗ್ಗೆ ಮಾತನಾಡಿದ ಸೂರ್ಯ, “ರಾಜ್ ಕಳೆದ ವರ್ಷದಿಂದ ಮತ್ತು ಈ ಸೀಸನ್ ಪೂರ್ತಿ ಕೊನೆಯ ಓವರ್ಗಳ ಅಭ್ಯಾಸವನ್ನು ಚೆನ್ನಾಗಿ ಮಾಡಿದ್ದಾರೆ. ಅವರು ಈ ವರ್ಷ ಸಂಪೂರ್ಣ ಭಿನ್ನ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಕೊನೆಯ ಓವರ್ನಲ್ಲಿ ಅವರು ಗೆಲುವಿನ ಹತ್ತಿರ ತಂದಿದ್ದರು. ಅವರ ಶ್ರಮದ ಬಗ್ಗೆ ನಮಗೆ ಹೆಮ್ಮೆಯಿದೆ,” ಎಂದರು.
ನಮ್ಮ ಸೋಲಿಗೆ ಬ್ಯಾಟಿಂಗ್ ವಿಭಾಗದ ಹಿನ್ನಡೆಯೇ ಮುಖ್ಯ ಕಾರಣ: ಸೂರ್ಯಕುಮಾರ್ ಯಾದವ್



