ಬೆಂಗಳೂರು : ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಕಗ್ಗಲೀಪುರದ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ.
ಕುಳ್ಳೇಗೌಡನಪಾಳ್ಯದ ಸಿಂಚನ(೨೧) ಕೊಲೆಯಾದವರು, ಪತಿ ರೇಣುಕಯ್ಯ ಎಂಬಾತನೇ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡುತ್ತಿದ್ದು,ಅದರಂತೆ ನಿನ್ನೆ ಕೂಡ ಗಲಾಟೆ ನಡೆಸಿ ಮನೆಮುಂದೆಯೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಆರೋಪಿ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.



