ಬೆಂಗಳೂರು: ಹೊಯ್ಸಳದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರು ಪೊಲೀಸರನ್ನು ಸಸ್ಪೆಂಡ್ ಮಾಡಿ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
ರಾಜಗೋಪಾಲನಗರ ಠಾಣೆಯ ಎಎಸ್ಐ ರಾಮಲಿಂಗಯ್ಯ, ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಕುಮಾರ್ ನನ್ನು ಸಸ್ಪೆಂಡ್ ಮಾಡಲಾಗಿದೆ.ರಾಮಲಿಂಗಯ್ಯ ಮತ್ತು ಪ್ರಸನ್ನ ಕುಮಾರ್ ಅವರು ಹೊಯ್ಸಳ ವಾಹನದಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಇದನ್ನು ಕೆಲವರು ವಿಡಿಯೋ ಮಾಡಿದ್ದು ಬಳಿಕ ಪೊಲೀಸ್ ಕಳ್ಳ ಎಂದು ಅಟ್ಟಿಸಿಕೊಂಡು ಹೋಗಿದ್ದರು.