ಬೆಂಗಳೂರು: ಮಹಾನ್ ಸಂತ, ತತ್ವಜ್ಞಾನಿ ಹಾಗೂ ಯುವಶಕ್ತಿಯ ಪ್ರೇರಣಾಸ್ರೋತರಾದ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸುತ್ತಿದ್ದೇವೆ. ಸ್ವಾಮಿ ವಿವೇಕಾನಂದರು ಭಾರತವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿತ್ವ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ ಗೋಪಾಲಯ್ಯ ಹೇಳಿದರು.
ಮಹಾಲಕ್ಷಿ÷್ಮ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠದ ಸ್ವಾಮಿ ವಿವೇಕಾನಂದ ಆಟದ ಮೈದಾನ ಸೋಮವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ೧೬೩ನೇ ಜಯತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎದ್ದೇಳಿ, ಗುರಿ ತಲುಪುವ ತನಕ ನಿಲ್ಲಬೇಡಿ ಎಂಬ ಅವರ ವಾಣಿ ಪ್ರತಿಯೊಬ್ಬ ಯುವಕರಿಗೂ ಮಾರ್ಗದರ್ಶಕವಾಗಿದೆ. ಶಿಕ್ಷಣವು ಕೇವಲ ಉದ್ಯೋಗಕ್ಕಾಗಿ ಅಲ್ಲ, ವ್ಯಕ್ತಿತ್ವ ನಿರ್ಮಾಣಕ್ಕಾಗಿ ಇರಬೇಕು. ಆತ್ಮವಿಶ್ವಾಸ, ಶಿಸ್ತು, ಸೇವಾಭಾವನೆ ಮತ್ತು ದೇಶಪ್ರೇಮವೇ ನಿಜವಾದ ಶಿಕ್ಷಣದ ಫಲ ಎಂದು ಅವರು ನಂಬಿದ್ದರು ಎಂದರು.
೧೮೯೩ರಲ್ಲಿ ಚಿಕಾಗೋ ಧರ್ಮಸಮ್ಮೇಳನದಲ್ಲಿ ನೀಡಿದ ಅವರ ಭಾಷಣವು ಭಾರತದ ಗೌರವವನ್ನು ಜಗತ್ತಿನಾದ್ಯಂತ ಹೆಚ್ಚಿಸಿತು. ಭಾರತೀಯ ಸಂಸ್ಕöÈತಿ, ಸಹಿಷ್ಣುತೆ ಮತ್ತು ಮಾನವೀಯತೆಯ ಸಂದೇಶವನ್ನು ಅವರು ವಿಶ್ವಕ್ಕೆ ಸಾರಿದ್ದಾರೆ. ವಿವೇಕಾನಂದ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಶ್ರಮ, ಪ್ರಾಮಾಣಿಕತೆ ಮತ್ತು ಸೇವಾಭಾವನೆಯೊಂದಿಗೆ ಸಮಾಜ ಹಾಗೂ ರಾಷ್ಟçದ ಅಭಿವೃದ್ಧಿಗೆ ಕೈಜೋಡಿಸಬೇಕು. ಸ್ವಾಮಿ ವಿವೇಕಾನಂದರ ಚಿಂತನೆಗಳು ನಮ್ಮೆಲ್ಲರಿಗೂ ಶಾಶ್ವತ ಪ್ರೇರಣೆಯಾಗಲಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಹರೀಶ್, ಮಂಡಲದ ಅಧ್ಯಕ್ಷ ಡಾಕ್ಟರ್ ನಾಗೇಂದ್ರ, ರಾಘವೇಂದ್ರ ಶೆಟ್ಟಿ,ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಮಂಜುನಾಥ್ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅವಿನ್ ಆರಾಧ್ಯ, ನಿಸರ್ಗ ಜಗದೀಶ್, ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
ಸ್ವಾಮಿ ವಿವೇಕಾನಂದರು ಭಾರತವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿ: ಶಾಸಕ ಗೋಪಾಲಯ್ಯ



