Tag: ಮುಖ್ಯಮಂತ್ರಿ

ರಾಷ್ಟಿçಯ ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬದಲಾಗುತ್ತಿರುವ ಪತ್ರಿಕಾಮಾಧ್ಯಮದ ಸ್ವರೂಪ ಕುರಿತು ವಿಚಾರ ಸಂಕಿರಣಕ್ಕೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೋಯ್ಲಿ ಚಾಲನೆ ನೀಡಿದರು. ಅಜೀಂ ಪ್ರೇಮ್‌ಜೀ, ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ನಾರಾಯಣ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾಖಾನಂ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರ ಕಾರ್ಯದರ್ಶಿ ಬಿಬಿ ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಉಪಸ್ಥಿತರಿದ್ದರು. ಇಂದುಸಂಜೆ ಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ಡಾ. ಜಿ.ವೈ. ಪದ್ಮನಾಗರಾಜು ಮತ್ತಿತರರು ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮದ ಶುಭಾರಂಭ ಮಾಡಿದರು.

";