ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಆರೋಪಿ ಬ್ರಿಜ್ಭೂಷಣ್ ಶರಣ್ ಸಿಂಗ್ ಅವರಂಥ ದಮನಕಾರಿಗಳನ್ನು ಕಿತ್ತೂಗೆಯಲು ಏನಾದರೂ ಕ್ರಮ ಕೈಗೊಳ್ಳಿ ಎಂದು ಭಾರತದ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಪೋಗಾಟ್ ಮತ್ತು ಸಾಕ್ಷಿ ಮಲಿಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ), ಕುಸ್ತಿಯ ಆಡಳಿತ ನಿಯಂತ್ರಣವನ್ನು ಮತ್ತೆ ವಿವಾದಿತ ಭಾರತೀಯ ಕುಸ್ತಿ ಪ್ರಾಧಿಕಾರಕ್ಕೆ ನೀಡಿದೆ. ಐಒಎಯ ಈ ನಡೆಯನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ವಿನೇಶ್ ಮತ್ತು ಸಾಕ್ಷಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೋದಿಯವರನ್ನು ಆಗ್ರಹಿಸಿದ್ದಾರೆ.