ದೇವನಹಳ್ಳಿ: ರಾಷ್ಟ್ರೀಯ ರೋಗನಿರೋಧಕ ದಿನ ಆಚರಣೆಯ ಅಂಗವಾಗಿ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ತಾಲೂಕಿನಲ್ಲಿ ಅನುಷ್ಠಾನ ಮಾಡಿ ಶೇಕಡ ನೂರರಷ್ಟು ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ದೇವನಹಳ್ಳಿ ತಾಲೂಕು ತಹಸೀಲ್ದಾರ್ ಶಿವರಾಜ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ಪಟ್ಟಣದಲ್ಲಿರುವ ತಾಲೂಕು ಕಚೇರಿಯಲ್ಲಿ “2024ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ತಾಲೂಕು ಮಟ್ಟದ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವನಹಳ್ಳಿ ತಾಲೂಕಿನಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 3 ರಿಂದ 6 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಸಂಬಂಧಪಟ್ಟ ಇಲಾಖೆಗಳ ಸಹಭಾಗಿತ್ವದಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸಿ ಎಂದು ಹೇಳಿದರು. ಕೆಳೆದ ಬಾರಿಗಿಂತ ಈ ಬಾರಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಒತ್ತು ನೀಡಿ ಪ್ರತಿ ಮಗುವಿಗು ಲಸಿಕೆ ತಲುಪುವಂತೆ ಮಾಡಿ ಹಾಗೂ ಗ್ರಾಮ ಪಂಚಾಯಿತಿ, ಪುರ ಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.
ತಾಲೂಕಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆ ಕಿರಿಯ ಮಹಾವಿದ್ಯಾಲಯಮತ್ತು ಪ್ರಥಮ ದರ್ಜೆ ಕಾಲೇಜುಗಳ ಎನ್ಎಸ್ಎಸ್ಮತ್ತು ಎನ್ಸಿಸಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮ ಅನುಷ್ಠಾನಕ್ಕಾಗಿ ನಿಯೋಜಿಸಿಕೊಳ್ಳಿ ಹಾಗೂಪೋಲಿಯೋ ಕಾರ್ಯಕ್ರಮದ ಕುರಿತು ಹಳ್ಳಿ, ಗ್ರಾಮಪುರಸಭೆ ವ್ಯಾಪ್ತಿಯಲ್ಲಿ ಆಟೋಗಳ ಮೂಲಕ ಎರಡು ದಿನಗಳ ಮುಂಚಿತವಾಗಿ ಪ್ರಚಾರ ಮಾಡುವುದು ಸದರಿ ವ್ಯಾಪ್ತಿಯಲ್ಲಿ ಬ್ಯಾನರ್ ಗಳ ಮುಖಾಂತರ ಭಿತ್ತಿ ಪತ್ರಗಳನ್ನು ಮುದ್ರಿಸಿ ಪ್ರದರ್ಶಿಸುವುದರ ಮೂಲಕ ಬಸ್ ರೈಲು ನಿಲ್ದಾಣದಲ್ಲಿ ಸೂಕ್ತ ಪ್ರಚಾರ ಮಾಡಬೇಕು, ಪೋಲಿಯೋ ಬೂತ್ ಗಳನ್ನು ನಿರ್ಮಿಸಲು ಸೂಕ್ತ ಸ್ಥಳಾವಕಾಶವನ್ನು ಕಲ್ಪಿಸಲು ಸೂಚಿಸಿದರು.
ಸಭೆಯಲ್ಲಿ ತಾಲೂಕು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಆರ್ ಟಿ ಓ ಇಲಾಖೆಯನರಸಿಂಹಮೂರ್ತಿ, ಸಿಡಿಪಿಓ ಮಹೇಶ್, ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅರುಣಾ, ಆರೋಗ್ಯ ಇಲಾಖೆಯ ವೆಂಕಟೇಶ್ ಮತ್ತು ರೇಖಾ,ಬೆಸ್ಕಾಂ ಇಲಾಖೆಯ ಲಕ್ಷ್ಮೀನಾರಾಯಣ್ ಸೇರಿದಂತೆ ತಾಲೂಕು ಮಟ್ಟದ ಕಾರ್ಯಕ್ರಮಾಧಿಕಾರಿಗಳು, ತಾಲೂಕು ಮಟ್ಟದ ಅರೋಗ್ಯಾಧಿಕಾರಿಗಳು, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.