ಶಿಡ್ಲಘಟ್ಟ: ತಾಲೂಕು ವಿವಿಧ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನೂತನವಾಗಿ ಆಯ್ಕೆಯಾದ ತಾಲೂಕಿನ ಶಾಸಕರಾದ ಸಿ.ಎನ್.ರವಿಕುಮಾರ್ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ಆರಂಭವಾಗಿದೆ.
ನೂತನ ಶಾಸಕರು ಈಗಾಗಲೇ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ತಮ್ಮದೇ ಕಲ್ಪನೆಯ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂಬ ಮಹಾದಾಸೆ ಶಾಸಕರಾದ ರವಿಕುಮಾರ್ ಅವರದಾಗಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ ಮುನಿರಾಜು ಅವರು ಸಹ ಇದೇ ರೀತಿಯ ಶೈಕ್ಷಣಿಕ ಅಭಿವೃದ್ಧಿಗೆಂದು ಹಿಂದೆ ನಡೆದ ಎಲ್ಲಾ ಸಭೆಗಳಲ್ಲಿ ಮುಖ್ಯವಾಗಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದರು. ಆದರೆ ವಿವಿಧ ಇಲಾಖೆ ಅಧಿಕಾರಿಗಳ ತಾತ್ಸಾರದಿಂದ ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ.
Leave a Review