This is the title of the web page
This is the title of the web page

ತಮಿಳಿಗೆ ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಜಂಟಲ್ ಮ್ಯಾನ್ 2 ಚಿತ್ರಕ್ಕೆ ಸಂಗೀತ ನಿರ್ದೇಶನ

ಆರ್.ಆರ್.ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿರುವ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಮತ್ತೆ ತಮಿಳು ಸಿನಿಮಾ ರಂಗಕ್ಕೆ ಹಾರಿದ್ದಾರೆ. ಈಗಾಗಲೇ ಕೆಲವು ತಮಿಳು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕೀರವಾಣಿ, ಈಗ ಮತ್ತೆ ಕಾಲಿವುಡ್ ನತ್ತ ಪ್ರಯಾಣ ಬೆಳೆಸಿದ್ದಾರೆ.

ಈ ಹಿಂದೆ ಜಂಟಲ್ ಮ್ಯಾನ್, ಕಾದಲ್ ದೇಶಂ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ಜಂಟಲ್ ಮ್ಯಾನ್ 2 ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಿದ್ದು,

ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಕ್ಕೆ ಕೀರವಾಣಿ ಒಪ್ಪಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಅಮೆರಿಕಾದಲ್ಲಿ ನಡೆದ ಸಮಾರಂಭದಲ್ಲಿ ಕೀರವಾಣಿ ಅವರಿಗೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಅವರು ಅಲ್ಲಿಂದ ಭಾರತಕ್ಕೆ ಬಂದ ಮೇಲೆ, ಅವರನ್ನು ಹೈದರಾಬಾದ್ ನಲ್ಲಿ ಚಿತ್ರದ ನಿರ್ದೇಶಕ ಎ. ಗೋಕುಲ್ ಕೃಷ್ಣ ಭೇಟಿಯಾಗಿದ್ದಾರೆ.