ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ಬಾರಿ ಮೂರು ದಾಖಲೆಗಳನ್ನು ಬರೆಯುವ ಮೂಲಕ ಎಂಬುದೇ ವಿಶೇಷ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್ಗಳು.
256 ರನ್ಗಳ ಕಠಿಣ ಗುರಿ ಪಡೆದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಭರ್ಜರಿ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಆ ದಾಖಲೆಗಳಾವುವು ಎಂದು ನೋಡುವುದಾದರೆ….
3 ವಿಶ್ವಕಪ್ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆAಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.
ತವರಿನಲ್ಲಿ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲಿ ತವರಿನಲ್ಲಿ ಯಾವುದೇ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿರಲಿಲ್ಲ. ಆದರೆ ಈ ಬಾರಿ ತವರು ಮೈದಾನಗಳಲ್ಲಿ ಪ್ರಚಂಡ ಪ್ರದರ್ಶನ ನೀಡಿರುವ ಭಾರತ ತಂಡವು ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಚಾಂಪಿಯನ್ ಪಟ್ಟ ಉಳಿಸಿಕೊಂಡ ಮೊದಲ ತಂಡ: ಟಿ20 ವಿಶ್ವಕಪ್ನಲ್ಲಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆAಬ ಹೆಗ್ಗಳಿಕೆಗೂ ಟೀಮ್ ಇಂಡಿಯಾ ಪಾತ್ರವಾಗಿದೆ. ಅಂದರೆ 2024 ರಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ಇದೀಗ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ.
ವಿಶ್ವಕಪ್ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ



