This is the title of the web page
This is the title of the web page

ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.
ಈ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಮೊನ್ನೆಯೇ ಟೀಂ ಇಂಡಿಯಾದ ಆಟಗಾರರೆಲ್ಲರೂ ಮುಂಬೈಗೆ ಬಂದಿಳಿದಿದ್ದರು.

ನಿನ್ನೆ ಮಧ್ಯಾಹ್ನದಿಂದ ಆಟಗಾರರು ಮೈದಾನಕ್ಕೆ ಆಗಮಿಸಿ ಅಭ್ಯಾಸ ಆರಂಭಿಸಿದ್ದಾರೆ. ನಾಳೆಯಿಂದ ಮಾರ್ಚ್ 22 ರವರೆಗೆ ಏಕದಿನ ಸರಣಿ ನಡೆಯಲಿದೆ.