ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬAದ ಹಿನ್ನೆಲೆ ಇಂದು ಬೆಳಗ್ಗೆ ೧೦೦ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ ಎಂದು ವರದಿಗಳು ತಿಳಿಸಿವೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ ೧,೫೦೦ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ.
ಗುರುವಾರ ಸಂಜೆಯಿAದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲರ್ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ತಾಂತ್ರಿಕ ತಂಡ ಈಗಾಗಲೇ ದೋಷ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಲಭ್ಯವಿರುವ ಮಾಹಿತಿಯೊಂದಿಗೆ ಸಿಬ್ಬಂದಿ, ವಿಮಾನ ಮಾಹಿತಿಯನ್ನ ಬರಹದ ಮೂಲಕ ಸಿದ್ದಪಡಿಸುತ್ತಿರುವ ಕಾರಣ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಹೀಗಾಗಿ ವಿಮಾನ ಹಾರಾಟ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ.



