ಬೆಂಗಳೂರು: ತೇಜಸ್ವಿ ಸೂರ್ಯ ಒಬ್ಬ ಕಾಲಿ ಟ್ರಂಕ್ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಲಾಲ್ ಬಾಗ್ ಗೆ ಸುರಂಗ ಮಾರ್ಗ ನಿರ್ಮಾಣ ಮಾಡುವುದರಿಂದ ಯಾವುದೇ ರೀತಿಯ ಸಮಸ್ಯೆ ಆಗಲ್ಲ. ತೇಜಸ್ವಿ ಸೂರ್ಯ ಯಾರು? ಎಂಪಿ ಆಗಿ ಪ್ರಧಾನಿ ಹತ್ರ ರೂ.೧ ಕೂಡ ಅನುದಾನ ತಂದಿಲ್ಲ. ಆತನೊಬ್ಬ ಖಾಲಿ ಟ್ರಂಕ್ ತೇಜಸ್ವಿ ಸೂರ್ಯ. ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಕೆಲಸ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸುರಂಗ ಮಾರ್ಗ ಯೋಜನೆಯಿಂದ ಲಾಲ್ಬಾಗ್ಗೆ ಯಾವುದೇ ತೊಂದರೆಯಾಗುವುದಿಲ್ಲ. ಸುರಂಗ ಮಾರ್ಗ ನಿರ್ಮಿಸುವುದು ಅನಿವಾರ್ಯ ಎಂದಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಕೆಲಸದ ಅವಧಿಯಲ್ಲಿ ತಾತ್ಕಾಲಿಕವಾಗಿ ಒಂದು ಎಕರೆ ಪ್ರದೇಶವನ್ನು ಬಳಸಿಕೊಂಡು ನಂತರ ಪಾರ್ಕ್ ಆಗಿ ಮರುಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಸಂಸದ ತೇಜಸ್ವಿ ಸೂರ್ಯ ಅವರ ವಿರೋಧಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಒಳಗಡೆ ಸುರಂಗ ಮಾರ್ಗ ನಿರ್ಮಿಸುವುದು ಅನಿವಾರ್ಯ. ಮುಂಬೈ ಮತ್ತು ದೆಹಲಿಯಂತಹ ನಗರಗಳಲ್ಲಿಯೂ ಇಂತಹ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ವಿರೋಧಿಗಳ ಮಾತು ಕೇಳಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೋಸ್ಕರ ಕೆಲಸ ಮಾಡುತ್ತಿದ್ದೇವೆ ಎಂದರು. ತೇಜಸ್ವಿ ಸೂರ್ಯ ಅವರದ್ದು ಖಾಲಿ ಟ್ರಂಕ್ ಎಂದು ಕಿಡಿಕಾರಿದರು.



