ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಡಾ. ತೇಜಸ್ವಿನಿಗೌಡ ಬೇಡಿಕೆಯಿಟ್ಟಿದ್ದಾರೆ.
ವಿಧಾನ ಪರಿಷತ್ನ ಬಿಜೆಪಿ ಸದಸ್ಯೆಯಾಗಿರುವ ಡಾ.ತೇಜಸ್ವಿನಿಗೌಡ, ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ನನಗೆ ನೀಡಿ ಎಂದು ಹೈಕಮಾಂಡ್ ನಾಯಕರ ಬಳಿ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗಿದೆ. ಹಾಲಿ ಸಂಸದ ಪ್ರತಾಪ್ ಸಿಂಹರ ಬದಲಿಗೆ ಮಹಿಳೆಯರಿಗೆ ಅವಕಾಶ ನೀಡಬಾರದೇಕೆ? ಎಂದು ಪ್ರಶ್ನಿಸಿ ಹೈಕಮಾಂಡ್ ನಾಯಕರ ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ನಾನು ಮಹಿಳಾ ಕೋಟಾದಲ್ಲಿ ಟಿಕೆಟ್ ಕೇಳುತ್ತಿದ್ದೇನೆ. ನಾನು ಈ ಹಿಂದೆ ಸಂಸದೆಯಾಗಿಯೂ ಕಾರ್ಯನಿರ್ವಹಣೆ ಮಾಡಿದ್ದೇನೆ. ಕಳೆದ 2023 ರ ರಾಜ್ಯ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಹಳೆಯ ಮೈಸೂರು ಭಾಗದ ಪ್ರಬಲ ಒಕ್ಕಲಿಗ ಸಮುದಾಯದ ಮತಗಳ ಕ್ರೂಢಿಕರಣದಲ್ಲೂ ನಾನು ಪಾತ್ರ ವಹಿಸಿದ್ದೇನೆ. ನಾನು ಆ ಭಾಗದಲ್ಲಿ ಚಿರಪರಿಚಿತಳಿದ್ದೇನೆ.
ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಿರಂತರ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಯ ಬಗ್ಗೆ ಅರಿತಿದ್ದೇನೆ. ಸಾಂಸ್ಕೃತಿಕವಾಗಿ ಲೋಕಸಭಾ ಕ್ಷೇತ್ರಕ್ಕೆ ಏನೆಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕೋ ಅದನ್ನೆಲ್ಲಾ ಮಾಡಲು ನನಗೆ ಅರಿವಿದೆ. ಹಾಲಿ ಸಂಸದರ ವಿರುದ್ಧ ಸ್ಮೋಕ್ ಬಾಂಬ್ ಸ್ಫೋಟದ ಆರೋಪಿಗಳಿಗೆ ಪಾಸ್ ಕೊಟ್ಟಿರುವ ಆರೋಪ ಇರುವ ಕಾರಣ. ಅವರ ಬದಲಿಗೆ ನನಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಲು ಅವರ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.