ಹೈದರಾಬಾದ್: ತೆಲಂಗಾಣದಲ್ಲಿ 10ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರನ್ನು ಬಂಧಿಸಲಾಗಿದೆ.
ತೆಲಂಗಾಣದ ಸಂಸದ ಬಂಡಿ ಸಂಜಯ್ ಅವರನ್ನು ಬಂಧಿಸಲಾಗಿದ್ದು, ಬಂಧನ ವೇಳೆ ಸಂಜಯ್ ಅವರ ನಿವಾಸಕ್ಕೆ ಪೆÇಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಬಂಧಿಸುವ ಸಂದರ್ಭದಲ್ಲಿ ಸಂಜಯ್ ಅವರ ಬೆಂಬಲಿಗರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.ಬಂಧಿತ ಬಂಡಿ ಸಂಜಯ್ ಅವರನ್ನು ನಲ್ಗೊಂಡ ಜಿಲ್ಲೆಯ… ಬೊಮ್ಮಲರಾಮರಂ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಈ ಕುರಿತು ಲೋಕಸಭೆ ಸ್ಪೀಕರ್ ಕಚೇರಿಗೆ ದೂರು ನೀಡಲಾಗುವುದಾಗಿ ಎಚ್ಚರಿಸಿದ್ದಾರೆ.
ಅವರ ಬಂಧನ ಖಂಡಿಸಿ ಖರೀಂನಗರದಲ್ಲಿ ಮುಖ್ಯಮಂತ್ರಿ ಕೆಸಿಆರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
Leave a Review