ಬೆಂಗಳೂರು: ತೆಲಂಗಾಣ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ತೆಲಂಗಾಣ ವಿಧಾನ ಸಭೆ ಚುನಾವಣೆ ಯ ಕ್ಲಸ್ಟರ್ ಉಸ್ತುವಾರಿ ಹಾಗೂ ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿರುವ ಅವರು ವೇಣುಗೋಪಾಲ್ ಅವರೊಂದಿಗೆ ಚುನಾವಣೆ ರಣತಂತ್ರ ಕುರಿತು ಸಮಾಲೋಚನೆ ನಡೆಸಿದರು.ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆ ಸಮೀಕ್ಷೆ ಗಳಲ್ಲೂ ಅಭಿಪ್ರಾಯ ವ್ಯಕ್ತ ವಾಗಿರುವುದರಿಂದ ಹೆಚ್ಚಿನ ಸ್ಥಾನ ಗಳಿಸಲು ಹೋರಾಟ ನಡೆಸಬೇಕು ಎಂದು ವೇಣುಗೋಪಾಲ್ ಅಭಿಪ್ರಾಯ ವ್ಯಕ್ತ ಪಡಿಸಿದರು.
ವೇಣುಗೋಪಾಲ್ ಅವರು ತೆಲಂಗಾಣ ಪ್ರವಾಸ ಮಾಡಿ ಬಂದ ನಂತರ ಜಮೀರ್ ಅಹಮದ್ ಖಾನ್ ಅವರನ್ನು ದೆಹಲಿಗೆ ಬರುವಂತೆ ತಿಳಿಸಿ ಸುಮಾರು ಒಂದೂವರೆ ಗಂಟೆ ಕಾಲ ಅಲ್ಲಿನ ರಾಜಕೀಯ ಸ್ಥಿತಿಗತಿ, ಕಾಂಗ್ರೆಸ್ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಸಮಾ ಲೋಚನೆ ನಡೆಸಿದರು.ಮೌಲಾನಾ ತನ್ವಿರ್ ಹಾಶ್ಮಿ ಪೀರಾ, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.