ಶಿವಮೊಗ್ಗ: ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ ಈಚೆಗೆ ಜನಿಸಿದ ಆನೆ ಮರಿಗೆ ನಾಮಕರಣ ಮಾಡುವುದಾಗಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ತಿಳಿಸಿದರು.
ಶಿವಮೊಗ್ಗ ಮೃಗಾಲಯಕ್ಕೆ ಭೇಟಿ ನೀಡಿದ್ದ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದರ ಜೊತೆಗೆ ಡಾ.ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆಯೂ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಡಾ.ಸಮೀಕ್ಷಾ ರೆಡ್ಡಿ ಸಾವು ತೀವ್ರ ಆಘಾತ ತಂದಿದೆ.
ಆನೆ ಮರಿಗೆ ಮೃತ ಡಾ.ಸಮೀಕ್ಷಾ ಹೆಸರು



