This is the title of the web page
This is the title of the web page

ಸೇತುವೆಯಿಂದ ಕೆಳಗೆ ಬಿದ್ದ ಬಸ್ 15 ಮಂದಿ ದುರ್ಮರಣ

ಮಧ್ಯಪ್ರದೇಶ: ಬಸೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ 15 ಮಂದಿ ದುರ್ಮರಣಕ್ಕೀಡಾಗಿ 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಮೂಲಗಳ ಪ್ರಕಾರ ಅಪಘಾತದ ಸಮಯದಲ್ಲಿ ಬಸ್‍ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಇಂದೋರ್‍ಗೆ ತೆರಳುತ್ತಿದ್ದಾಗ ಈ ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಂತರ, ಮಧ್ಯಪ್ರದೇಶ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ತೀವ್ರವಾಗಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಲು ರಾಜ್ಯ ಸರ್ಕಾರ 50,000 ರೂ. ಹಾಗೂ ಗಾಯಗೊಂಡವರಿಗೆ 25,000 ರೂ. ಘೋಷಿಸಿದೆ.