ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ಮುಖಂಡ ಶಾಮನೂರು ಶಿವ ಶಂಕರಪ್ಪ ಅವರ ನಿಧನದಿಂದ ಉಪಚುನಾವಣೆ ಎದುರಾಗಿತ್ತು. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಸಂಸದರಾಗಿದ್ದ ಎಚ್.ವೈ. ಮೇಟಿ ಅವರ ನಿಧನದಿಂದ ಉಪಚುನಾವಣೆ ಎದುರಾಗಿತ್ತು.
ಚುನಾವಣೆ ಘೋಷಣೆಯಾದ ಮೇಲೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿಗಧಿತ ದಿನಾಂಕಕ್ಕಿAತ ಎರಡು ಮೂರು ದಿನಗಳ ಮುಂಚೆಯೇ ಪ್ರಕಟಿಸಿತ್ತು. ಆದರೆ ಕಾಂಗ್ರೆಸ್ ಪಕ್ಷ ಕಡೆಯ ಗಳಿಗೆ ವರೆಗೂ ಅಭ್ಯರ್ಥಿಗಳ ಘೋಷಣೆ ಮಾಡಲು ಹರಸಾಹಸ ಪಡುವಂತಾಗಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ಹಲವರು ಹಾಗೂ ಮತ್ತು ಕೆಲವರು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದುಕುಳಿತಿದ್ದರು.
ಇದರಿಂದಾಗಿ ಟಿಕೆಟ್ ಘೋಷಣೆಗೆ ಗೊಂದಲ ಉಂಟಾಗಿ ಟಿಕೆಟ್ ಘೋಷಣೆ ಕಗ್ಗಂಟಾಗಿತ್ತು. ಕೊನೆಗೆ ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಸಚಿವ ಎಸ್ಎಸ್ ಮಲ್ಲಿಕಾರ್ಜುನರವರ ಪುತ್ರ ಸಮರ್ಥ ಶಾಮನೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಯಿತು. ಇದರಿಂದಾಗಿ ಆ ಪಕ್ಷದಲ್ಲಿ ಗೊಂದಲ ಉಂಟಾಗಿ ಕೆಲವು ಮುಸ್ಲಿಂ ಸಮುದಾಯದವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಕಣದಲ್ಲಿ ಉಳಿದರು. ಅಬ್ದುಲ್ ಜಬ್ಬಾರ್ ಎಂಬುವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮವೂ ಜರುಗಿಸಲಾಯಿತು. ಸಚಿವ ಜಮೀರ್ ಅಹಮ್ಮದ್ ಅವರು ಸಂಪೂರ್ಣವಾಗಿ ಕೇರಳ ವಿಧಾನಸಭಾ ಚುನಾವಣೆಯಲ್ಲೇ ತೊಡಗಿಸಿಕೊಂಡು ಒಂದು ದಿನದ ಮಟ್ಟಿಗೆ ಮಾತ್ರ ದಾವಣಗೆರೆ ಬಂದು ಹೋದರು.
ಕಾಂಗ್ರೆಸ್ ಬಿಜೆಪಿಗೆ ಪ್ರತಿಷ್ಠೆಯಾಗಿದ್ದ ಉಪಚುನಾವಣೆ



