This is the title of the web page
This is the title of the web page

ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಗು ಬಲಿ

ಬೆಂಗಳೂರು: ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 2 ವರ್ಷದ ಮಗು ಬಲಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಜಲಮಂಡಳಿ ಕಾಮಗಾರಿಗೆ ಎಂದು ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಕಾರ್ತಿಕ್ ಎಂಬ 2 ವರ್ಷದ ಮಗು ಸಾವನ್ನಪ್ಪಿದೆ. ತೆಗೆದಿದ್ದ ಗುಂಡಿ ಮುಚ್ಚದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಮಗುವಿನ ಪೋಷಕರಾದ ತಂದೆ ಹನುಮಾನ್, ತಾಯಿ ಹಂಸ ದಂಪತಿ ಆರೋಪ ಮಾಡಿದ್ದಾರೆ.

ಜಲಮಂಡಳಿ ಇಂಜಿನಿಯರ್, ಕಾಂಟ್ರ್ಯಾಕ್ಟರ್ ವಿರುದ್ಧ ಕೇಸ್ ದಾಖಲಾಗಿದ್ದು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.