ಮಂಡ್ಯ : ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಜಯನಗರದ ಮನೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಮಗು ಬದುಕುಳಿದಿದೆ ಎಂದು ತಿಳಿದುಬಂದಿದೆ.
ಕಳೆದ ಮೂರು ವರ್ಷದ ಹಿಂದೆ ದರ್ಶನ್ ಮತ್ತು ದಿವ್ಯಶ್ರೀ ಎಂಬುವವರು ವಿವಾಹವಾಗಿದ್ದರು. ದಂಪತಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೆಆರ್ ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.



