ಜಗಜ್ಯೋತಿ ಕ್ರಾಂತಿಕಾರಿ ವಿಶ್ವಗುರು ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಇಂಗಳೇಶ್ವರ ಗ್ರಾಮದಲ್ಲಿ ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ 30, 1134) ರೋಹಿಣಿ ನಕ್ಷತ್ರದಲ್ಲಿ ಜನಿಸಿದರು. ಭಾರತದ 12 ನೇ ಶತಮಾ ನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸನ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, “ಆಧ್ಯಾತ್ಮಿಕ ಅನುಭವದ ಭವನ), ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು. ಬಸವಣ್ಣನವರ ಜೊತೆ 770 ಅಮರಗಣಂಗಳು ಇದ್ದರೆಂದು ಮತ್ತು 1,96,000 ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ. ಕಾಯಕವೇ ಕೈಲಾಸ ಶರಣರ ದೃಷ್ಟಿಯಲ್ಲಿ ಯಾವ ಕಾಯಕವೂ ಚಿಕ್ಕದಲ್ಲ ಅಥವಾ ದೊಡ್ಡದಲ್ಲ.”ಮನೆ ನೋಡಾ ಬಡವರು, ಮನ ನೋಡಾ ಘನ ಸೋಂಕಿನಲ್ಲಿ ಶುಚಿ; ಸರ್ವಾಂಗ ಕಲಿಗಳು.
ಪಸರಕ್ಕನುವಿಲ್ಲ; ಬಂದ ತತ್ಕಾಲಕ್ಕೆ ಉಂಟು. ಕೂಡಲಸಂಗನ ಶರಣರು ಸ್ವತಂತ್ರ ಧೀರರು.”ಎಂದು ಬಸವಣ್ಣನವರು ಕಾಯಕಜೀವಿಗಳಾದ ಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯನವರ ವ್ಯಕ್ತಿತ್ವವನ್ನು ಕುರಿತು ಕಣ್ಣಿಗೆ ಕಟ್ಟುವಂತೆ ಹೇಳಿದ್ದಾರೆ. ಅವರು ಘನಮನದವರೂ ಪರಿಶುದ್ಧರೂ ಸ್ವತಂತ್ರ ಧೀರರೂ ಆಗಿದ್ದಾರೆ. “ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುಲ ಹರಿವುದು ಜಂಗಮವಾದರೂ ಕಾಯಕದಿಂದಲೇ ವೇಷ ಪಾಶ ಹರಿವುದು.
ಇದು ಚೆನ್ನಬಸವಣ್ಣಪ್ರಿಯ ಚಂದೇಶ್ವರ ಲಿಂಗದ ಅರಿವು: ಎಂದು ನುಲಿಯ ಚಂದಯ್ಯನವರು ಕಾಯಕದ ಮಹತ್ವವನ್ನು ಸಾರಿದ್ದಾರೆ. ಗುರು-ಲಿಂಗ-ಜAಗಮಕ್ಕೆ ಕಾಯಕವೇ ಆಧಾರವಾಗಿದೆ ಎಂದು ಮನ ತುಂಬುಗುವಂತೆ ಹೇಳಿದ್ದಾರೆ.
“ಕಾಯಕದಲ್ಲಿ ನಿರತನಾದಡೆಗುರುದರ್ಶನವಾದರೂ ಮರೆಯಬೇಕು ಲಿಂಗಪೂಜೆಯಾದರೂ ಮರೆಯಬೇಕು ಜಂಗಮ ಮುಂದೆ ನಿಂದಿದ್ದರೂ ಹಂಗು ಹರಿಯಬೇಕು.ಕಾಯಕವೇ ಕೈಲಾಸವಾದ ಕಾರಣಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು.”ಎಂದು ಆಯ್ದಕ್ಕಿ ಮಾರಯ್ಯ ಹೇಳುವಲ್ಲಿ ಕಾಯಕದ ಮಹತ್ವ ಪರಾಕಾಷ್ಠೆಯನ್ನು ತಲುಪುತ್ತದೆ.
“ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ ಸದ್ಭಕ್ತಂಗೆ ಎತ್ತ ನೋಡಿದತ್ತ ಲಕ್ಷ್ಮೀ ತಾನಾಗಿಪ್ಪಳುಮಾರಯ್ಯಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ” ಎಂದು ಆಯ್ದಕ್ಕಿ ಲಕ್ಕಮ್ಮ ಕಾಯಕದ ಮಹತ್ವ ವ್ಯಕ್ತಪಡಿಸುತ್ತಾಳೆ. ಬಸವಣ್ಣನವರ ಸ್ತ್ರೀ ಸಮಾನತೆ: ಕರ್ನಾಟಕದ ಇತಿಹಾಸದಲ್ಲಿ ಹನ್ನೆರಡನೆಯ ಶತಮಾನ
ವಿಶಿಷ್ಟವಾದ ಕಾಲಘಟ್ಟ. ಸಮಾಜದಲ್ಲಿ ಜಿಡ್ಡು ಗಟ್ಟಿದ ನಂಬಿಕೆಗಳಿಗೆ ಸಮಾನತೆಯ ಸ್ಪರ್ಶ ನೀಡಿದ ಶರಣರು. ಲಿಂಗ ಭೇದದ ವಿರುದ್ಧ ಧ್ವನಿ ಎತ್ತಿ ಹೆಣ್ಣು ಗಂಡು ಎಂಬ ಕಲ್ಪನೆ ದೇಹಕ್ಕೆ ಮಾತ್ರ ಆತ್ಮಕ್ಕೆ ಅಲ್ಲ ಎನ್ನುವ ವಿಶಿಷ್ಟ ಕಲ್ಪನೆಯ ಮೂಲಕ ಅನುಭವ ಮಂಟಪದಲ್ಲಿ ಸ್ತ್ರೀ ಯರಿಗೆ ಸಮಾನ ಅವಕಾಶ ನೀಡಿದರು. ಅನೇಕ ಶರಣೆಯರು ಅಕ್ಕಮಹಾದೇವಿ ತರಹ ವಚನಗಳನ್ನು ಬರೆದರು. ಜಾತ್ಯತೀತ ಸಮಾಜದ ಕ್ರಾಂತಿಕಾರಿ: ಇವನಾರವ, ಇವನಾರವ, ಇವನಾರವನೆಂದಿನಸದಿರಯ್ಯ ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದಣಿಸಯ್ಯ ಕೂಡಲಸಂಗಮದೇವ ಎನ್ನುವ ತಮ್ಮ ವಚನದಂತೆ ವಿಶ್ವದಲ್ಲಿರುವ ಎಲ್ಲಾ ಮಾನವ ಜನಾಂಗ ಒಂದೇ ಎಲ್ಲರೂ ನಮ್ಮವರೇ ಎನ್ನುವ ಪ್ರೀತಿಯ ಭಾವನಾ ಸಂದೇಶವನ್ನು ತಮ್ಮ ವಚನದ ಮೂಲಕ ಸಮಾನತೆ ಸಾರಿದ ಹರಿಕಾರ 12ನೇ ಶತಮಾನದ ಮಡಿವಂತಿಕೆ ಕಾಲದಲ್ಲಿ ಬಿಜ್ಜಳ ರಾಜನ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವನ್ನು ಮಾಡಿಸಿ ಕಲ್ಯಾಣದಲ್ಲಿ ಬಸವಣ್ಣ ಕ್ರಾಂತಿ ಮಾಡಿದರು.**ಅನುಭವ ಮಂಟಪದ ಕಲ್ಪನೆ ಇಂದಿನ ಸಂಸತ ಕಲಾಪ* 12ನೇ ಶತಮಾನದಲ್ಲಿ ಬಸವಣ್ಣನವರು ನಿರ್ಮಿಸಿದ ಅನುಭವ ಮಂಟಪದ ಪರಿಕಲ್ಪನೆಯಲ್ಲಿ ಇಂದಿನ ಸಂಸತ ರಚನೆಯಾಗಿದೆ ಅಂದರೆ ತಪ್ಪಾಗಲಾರದು. ಈಗ ನಡೆಯುವ ಅಧಿವೇಶನಗಳಂತೆ ಅನುಭವ ಮಂಟಪದಲ್ಲಿ ಸಮಾಜದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಅದಕ್ಕೆ ಪರಿಹಾರವನ್ನು ಕಂಡು ಕೊಳ್ಳುತ್ತಿದರು. ಕಳಬೇಡ, ಕೊಲಬೇಡ; ಹುಸಿಯ ನುಡಿಯಲು ಬೇಡ; ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ; ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ. ಇದೇ ಅಂತರAಗಶುದ್ಧಿ, ಇದೇ ಬಹಿರಂಗಶುದ್ಧಿ. ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ! ಎಂಬ ಬಸವಣ್ಣ ಅವರ ವಚನವನ್ನು ಪಾಲಿಸಿದರೆ ಯಾವುದೇ ಕಾನೂನು ಅವಶ್ಯಕತೆ ಇರುವುದಿಲ್ಲ ಎಂದರೆ ಅತಿಶೋಕ್ತಿ ಆಗಲಾರದು.
-ಶ್ರೀಧರ್ ಹಿರೇಮಠ, ದೈಹಿಕ ಶಿಕ್ಷಣ ಶಿಕ್ಷಕ, ಕೈವಾರ
ಕರ್ನಾಟಕದ ಸಾಂಸ್ಕೃತಿಕ ನಾಯಕ ಸಮಾನತೆಯ ಹರಿಕಾರ ವಿಶ್ವ ಗುರು ಬಸವಣ್ಣ



