ಬೆಂಗಳೂರು: ಪಕ್ಷ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಹಲವರು ಶಾಸಕರಾಗಿ, ಮಂತ್ರಿಗಳಾಗಿ ಅಧಿಕಾರ ಅನುಭವಿಸುತ್ತಿದ್ದಾರೆ. ನಮಗೂ ಮಂತ್ರಿ ಸ್ಥಾನ ಕೊಡಿ ಎಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಲು ಹಿರಿಯ ಶಾಸಕರ ನಿಯೋಗವೊಂದು ದೆಹಲಿಗೆ ತೆರಳಲು ಸಜ್ಜಾಗಿದೆ.
ನಿನ್ನೆ ರಾತ್ರಿ ಬೆಂಗಳೂರಿನ ಪ್ರತಿಷ್ಠಿತ ವಸತಿ ಗೃಹವೊಂದರಲ್ಲಿ ಸದಸ್ಯರಿದ್ದ ಕಾಂಗ್ರೆಸ್ನ ಹಿರಿಯ ಶಾಸಕರು ಸುದೀರ್ಘಕಾಲ ಈ ಸಂಬAಧ ಚರ್ಚೆ ನಡೆಸಿದ್ದಾರೆ.
ಈಗಾಗಲೇ ಮಂತ್ರಿಗಳಾಗಿರುವವರು ಸುದೀರ್ಘ ಕಾಲ ಅಧಿಕಾರ ಅನುಭವಿಸಿದ್ದಾರೆ. ಉಳಿದಿರುವ ಅವಧಿಗೆ ನಮಗೂ ಮಂತ್ರಿಗಳಾಗಲು ಅವಕಾಶ ಕಲ್ಪಿಸಬೇಕು ಎಂದು ಹಿರಿಯ ಶಾಸಕರು ಒತ್ತಾಯಿಸಲಿದ್ದಾರೆ. ಬೋರಿಂಗ್ ಕ್ಲಬ್ನಲ್ಲಿ ಸದಸ್ಯರಿದ್ದ ಹಿರಿಯ ಶಾಸಕರು ಸುದೀರ್ಘವಾಗಿ ಚರ್ಚಿಸಲಿದ್ದಾರೆ. ಈ ವಿಷಯವನ್ನು ಸಾಗರದ ಕಾಂಗ್ರೆಸ್ ಪಕ್ಷದ ಶಾಸಕ ಗೋಪಾಲಕೃಷ್ಣ ಬೇಳೂರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ನಾವು ಸಭೆ ಸೇರಿ ಪರಸ್ಪರಸಮಾಲೋಚನೆ ನಡೆಸಿದ್ದೇವೆ. ಸೋಮವಾರ ರಾತ್ರಿ ದೆಹಲಿಗೆ ತೆರಳಲಿದ್ದೇವೆ. ಪಕ್ಷದ ವರಿಷ್ಠರನ್ನು ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಲಿದ್ದೇವೆ. ಈಗಾಗಲೇ ಹಲವರು ಅಧಿಕಾರ ಅನುಭವಿಸುತ್ತಿದ್ದಾರೆ. ನಮಗೂ ಅವಕಾಶ ಕೊಡಿ ಎಂದು ಬೇಡಿಕೆ ಇಡಲಿದ್ದೇವೆ ಎಂದು ತಿಳಿಸಿದ್ದಾರೆ. ತಾವು ದೆಹಲಿಗೆ ಹೋಗುವ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ ಹೋಗುತ್ತೇವೆ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬದಲಾವಣೆ ಸಂಬAಧ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಹೊಸದಾಗಿ ಹಿರಿಯ ಶಾಸಕರ ನಿಯೋಗ ದೆಹಲಿಗೆ ತೆರಳುವುದು ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿದೆ.



