ಬೆಂಗಳೂರು ನಗರ ಜಿಲ್ಲೆ: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ನಗರದಲ್ಲಿ ಬಾಲ್ಯ ವಿವಾಹ ಆಗುವ ಸಂಭವ ಹೆಚ್ಚು ಇರುವುದರಿಂದ ಮುಂಜಾಗೃತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಬೆಂಗಳೂರು ನಗರ ದಲ್ಲಿ ಬಾಲ್ಯ ವಿವಾಹ ಮುಕ್ತ ಬೆಂಗಳೂರು ನಗರ ಮಾಡುವ ಉದ್ದೇಶದಿಂದ ಅನಾದಿ ಕಾಲದಿಂದ ನಡೆದು ಬಂದಿರುವ ಅನಿಷ್ಟ ಪದ್ಧತಿಯಾಗಿದ್ದು, ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿರುವದರಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಇರುವುದರಿಂದ ಎಲ್ಲಾ ಬಾಲ್ಯ ವಿವಾಹ ನಿಷೇದಾಧಿಕಾರಿಗಳಿಗೆ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ತಿಳಿಸಿದ್ದಾರೆ.ವಿವಿಧ ಇಲಾಖೆಗಳಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇದಾಧಿಕರಿಗಳನ್ನು ನೇಮಿಸಲಾಗಿದ್ದು, ಕಾರ್ಯಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳದೆ ಉದಾಸೀನ ತೋರಿಸಿ ಬಾಲ್ಯ ವಿವಾಹ ತಡೆಗಟುವಲ್ಲಿ ವಿಫಲವಾದರೆ ಅವರನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಾಲ್ಯ ವಿವಾಹ ನಿಷೇದ ಕಾಯ್ದೆ ಅನ್ವಯ 2006 ರ ಪ್ರಕಾರ 18 ವರ್ಷದ ಒಳಗಿನ ಹುಡುಗಿ, 21 ವರ್ಷ ದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೆ ಇಂತಹ ಮದುವೆ ಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿಲಾಗುತ್ತದೆ. ಕೇವಲ ಮದುವೆಯಾಗುವ ವಯಸ್ಕನಿಗೆ ಹುಡುಗಿಯ ತಂದೆ ತಾಯಿಗಳಲ್ಲದೆ ಬಾಲ್ಯ ವಿವಾಹಕ್ಕೆ ನೆಡೆಸಿಕೊಡುವ ಧಾರ್ಮಿಕ ಮುಖಂಡರು ಪುರೋಹಿತರು, ವಿವಾಹದಲ್ಲಿ ಪಾಲ್ಗೊಳ್ಳುವ ಸಂಬಂಧಿಕರು, ಸಾಮೂಹಿಕ ವಿವಾಹವನ್ನು ಆಯೋಜಿಸಿದವರು, ವಧು-ವರರ ಪೋಷಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಸಾರ್ವನಿಕರಿಗೆ ತಿಳಿಸಿದ್ದಾರೆ.ಸಭೆಯಯಲ್ಲಿ ಶಾಲೆ ಬಿಟ್ಟ ಮಕ್ಕಳು ಹೆಚ್ಚು ಬಾಲ್ಯ ವಿವಾಹಕ್ಕೆ ಒಳಗಾಗುವ ಸಾಧ್ಯತೆಗಳಿರುವುದರಿಂದ ಶಾಲೆ ಬಿಟ್ಟ ಮಕ್ಕಳ ಬಗ್ಗೆ ಮಾಹಿತಿ ನೀಡಲು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಜಿಲ್ಲಾದ್ಯಂತ ಬಾಲ್ಯ ವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಲ್ಲಿನ ಬಾಲ್ಯವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಕ್ರಮಕೈಗೊಳುವಂತೆ ತಿಳಿಸಿದರು.ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಿಗೆ, ಬೆಂಗಳೂರು ಕೇಂದ್ರ ದೂರವಾಣಿ ಸಂಖ್ಯೆ. 08354-295345, ಬೆಂಗಳೂರು ಪೂರ್ವ ದೂರವಾಣಿ ಸಂಖ್ಯೆ. 080-29904132, ಬೆಂಗಳೂರು ಪಶ್ಚಿಮ ದೂರವಾಣಿ ಸಂಖ್ಯೆ: 080-22076833, ಬೆಂಗಳೂರು ಉತ್ತರ ದೂರವಾಣಿ ಸಂಖ್ಯೆ. 080-28461452, ಬೆಂಗಳೂರು ದಕ್ಷಿಣ ದೂರವಾಣಿ ಸಂಖ್ಯೆ. 080-23442233 ಗೆ ಕರೆ ಮಾಡುವ ಮೂಲಕ ಬೆಂಗಳೂರು ನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಬೆಂಗಳೂರು ಮಾಡಲು ಸಾರ್ವಜನಿಕರು ಕೈಜೋಡಿಸಬೇಕೆಂದು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ರವರು ಕರೆ ನೀಡಲಾಯಿತು.



