ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಾ ಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು.
ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ.ಇದು ನನ್ನ ಮೊದಲ ಚಿತ್ರ. ನನ್ನ ಮೇಲೆ ನಂಬಿಕೆ ಇಟ್ಟು ಇದು ಕಮರ್ಷಿಯಲ್ ಥ್ರಿಲ್ಲರ್ ಚಿತ್ರ. ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಹಳ್ಳಿ ಹಿನ್ನೆಲೆಯ ಚಿತ್ರ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ.
ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಜೂನ್ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ. ಇದು ಕಮರ್ಷಿಯಲ್ ಚಿತ್ರವಾದರೂ ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳಿವೆ ಎಂದು ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ.
ಇದೊಂದು ಕೃಷಿ ಮತ್ತು ರೈತರ ಸಿನಿಮಾ ಎಂದು ಮಾತನಾಡಿದ ನಾಯಕ ಜಯ್ ಶೆಟ್ಟಿ, ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಧನ್ಯವಾದಗಳು ಎಂದರು.