ಬೆಂಗಳೂರು: ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (ಕೆಎಎಎಂಎಸ್- ಕರ್ನಾಟಕ ಅಡ್ವಾನ್ಸ್÷್ಡ ಅಟೆಂಡನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್) (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ ಶೇ. 100ರಷ್ಟು ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು.
ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (ಜಿಯೋಗ್ರಾಫಿಕಲ್ ಲೊಕೇಶನ್) Geographical Location) ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ.
ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ: ಯಾವುದೇ ಬಾಹ್ಯ ಖಾಸಗಿ ತಂತ್ರಜ್ಞಾನ ಸಂಸ್ಥೆಗಳ ನೆರವಿಲ್ಲದೆ, ಸಂಪೂರ್ಣವಾಗಿ ಸರ್ಕಾರದ ಪರಿಸರ ವ್ಯವಸ್ಥೆಯಲ್ಲೇ “ಕರ್ತವ್ಯ” ಸಾಫ್ಟ್ವೇರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಉಸ್ತುವಾರಿಯಲ್ಲಿ, ಸೆಂಟರ್ ಫಾರ್ ಇ-ಗವರ್ನೆನ್ಸ್ (ಸಿಇಜಿ) (ಅeಉ) ಮತ್ತು ಕರ್ನಾಟಕ ಎಐ ಸೆಲ್ (Karnataka AI Cell) ಜಂಟಿಯಾಗಿ ಇದನ್ನು ಸಿದ್ಧಪಡಿಸಿವೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ವೆಂಡರ್ ವೆಚ್ಚ ಉಳಿತಾಯವಾಗಿದ್ದು, ದತ್ತಾಂಶ ಸುರಕ್ಷತೆ ಮತ್ತು ಸ್ವಾಯತ್ತತೆ ಹೆಚ್ಚಾಗಿದೆ. ಕರ್ನಾಟಕದ ಈ ಯಶಸ್ವಿ ಮಾದರಿಯನ್ನು ದೇಶದ ಇತರೆ ರಾಜ್ಯಗಳೂ ಅಳವಡಿಸಿಕೊಳ್ಳಬಹುದಾಗಿದೆ.
ತಂತ್ರಜ್ಞಾನದ ಪ್ರಮುಖ ವೈಶಿಷ್ಟ್ಯಗಳು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಮುಖ ಗುರುತಿಸುವಿಕೆ – ವಂಚನೆಯ ಹಾಜರಾತಿಯನ್ನು ತಡೆಯಲು ಲೈವ್ನೆಸ್ ಡಿಟೆಕ್ಷನ್ (Liveness Detection) ತಂತ್ರಜ್ಞಾನದೊAದಿಗೆ ಎಐ ಫೇಶಿಯಲ್ ರೆಕಗ್ನಿಷನ್ ಬಳಸಲಾಗಿದೆ.
ಜಿಯೋಫೆನ್ಸಿಂಗ್ Geofencing)-ಜಿಐಎಸ್ ತಂತ್ರಜ್ಞಾನದ ಮೂಲಕ ಉದ್ಯೋಗಿ ತನ್ನ ಕಚೇರಿಯ ನಿಗದಿತ ಪರಿಧಿಯೊಳಗೆ ಇದ್ದಾಗ ಮಾತ್ರ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ.
ಸಂಯೋಜಿತ ಡೇಟಾಬೇಸ್- ಇದನ್ನು ಆಧಾರ್ ಇ-ಕೆವೈಸಿ (e-ಏಙಅ) ಮತ್ತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಹೆಚ್ಆರ್ಎಂಎಸ್) ಯೊಂದಿಗೆ ಸಂಯೋಜಿಸಲಾಗಿದೆ.
ಮೊಬೈಲ್ ಆಪ್ ಮತ್ತು ರಜೆ ನಿರ್ವಹಣೆ-ಆಂಡ್ರಾಯ್ಡ್ ಮತ್ತು ಐಒಎಸ್ ಆಪ್ಗಳ ಮೂಲಕ ಹಾಜರಾತಿ, ರಜೆ ಮತ್ತು ಅಧಿಕೃತ ಹೊರಗಿನ ಕೆಲಸದ ಒಒಡಿ ವಿವರಗಳನ್ನು ದಾಖಲಿಸುವ ಸೌಲಭ್ಯವಿದೆ.
ಇಲಾಖೆಗಳಲ್ಲಿ ದಾಖಲೆ ವೇಗದ ಅನುಷ್ಠಾನ ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಈ ತಂತ್ರಜ್ಞಾನವು ಇಲಾಖೆಗಳಲ್ಲಿ ಅತ್ಯಂತ ವೇಗವಾಗಿ ಅನುಷ್ಠಾನಗೊಳ್ಳುತ್ತಿದೆ.
ಕಳೆದ ವಾರ ಅಂದಾಜು 2,46,000 ರಷ್ಟಿದ್ದ ಒಟ್ಟು ನೋಂದಾಯಿತ ಉದ್ಯೋಗಿಗಳ ಸಂಖ್ಯೆ ಪ್ರಸ್ತುತ ವಾರದಲ್ಲಿ 3,01,034ಕ್ಕೆ ಏರಿಕೆಯಾಗಿದೆ. ಇದು ಕೇವಲ ಒಂದೇ ವಾರದಲ್ಲಿ ಶೇಕಡ 25 ಕ್ಕಿಂತಲೂ ಹೆಚ್ಚು (55,000ಕ್ಕೂ ಅಧಿಕ ಹೊಸ ಸೇರ್ಪಡೆ) ಬೆಳವಣಿಗೆಯಾಗಿದೆ. ಇದೇ ಅವಧಿಯಲ್ಲಿ, ಆ್ಯಪ್ ಮೂಲಕ ಪ್ರತಿದಿನ ದಾಖಲಾಗುವ ದೈನಂದಿನ ಹಾಜರಾತಿ ಸಂಖ್ಯೆಯು ಸಹ 1,85,308 ರಿಂದ 2,32,612 ಕ್ಕೆ ಜಿಗಿದಿದ್ದು, ಸಕ್ರಿಯ ಬಳಕೆಯಲ್ಲಿ ಶೇಕಡ 25ರಷ್ಟು ಭಾರಿ ಏರಿಕೆ ದಾಖಲಾಗಿದೆ.
ಪ್ರಸ್ತುತ 42 ಇಲಾಖೆಗಳ 4,78,522 ನೌಕರರನ್ನು ಈ ವ್ಯವಸ್ಥೆಗೆ ಒಳಪಡಿಸಲಾಗಿದ್ದು, ಈ ಪೈಕಿ 3.01 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಈಗಾಗಲೇ ನೋಂದಾಯಿಸಿಕೊAಡಿದ್ದಾರೆ. ಕೇವಲ ಒಂದೇ ವಾರದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಶೇಕಡ 25ರಷ್ಟು ಅಭೂತಪೂರ್ವ ಪ್ರಗತಿ ಕಂಡುಬAದಿದೆ.
ಶಾಲಾ ಶಿಕ್ಷಣ ಇಲಾಖೆ: ಒಟ್ಟು 1,76,055 ಉದ್ಯೋಗಿಗಳಲ್ಲಿ ಈಗಾಗಲೇ 1,68,252 ನೌಕರರು ನೋಂದಾಯಿಸಿಕೊAಡಿದ್ದು, 1,41,800ಕ್ಕೂ ಹೆಚ್ಚು ದೈನಂದಿನ ಚೆಕ್-ಇನ್ ಗಳೊಂದಿಗೆ ಮೊದಲ ಸ್ಥಾನದಲ್ಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 66,969 ನೋಂದಣಿ ಹಾಗೂ 54,400ಕ್ಕೂ ಹೆಚ್ಚು ದೈನಂದಿನ ಹಾಜರಾತಿಯೊಂದಿಗೆ ಎರಡನೇ ಸ್ಥಾನದಲ್ಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾದ ನಂತರ, ಶಾಲಾ ಶಿಕ್ಷಣ ಇಲಾಖೆಯ ಸಿಬ್ಬಂದಿ ಇದನ್ನು ಸಕ್ರಿಯವಾಗಿ ಬಳಸುತ್ತಿದ್ದಾರೆ. ಇನ್ನುಳಿದ ಹಲವು ಇಲಾಖೆಗಳು ಈಗಾಗಲೇ ಶೇಕಡ 90ಕ್ಕಿಂತ ಹೆಚ್ಚು ನೋಂದಣಿ ಮೈಲಿಗಲ್ಲನ್ನು ದಾಟಿವೆ.
ಇತರ ಇಲಾಖೆಗಳು: ಪದವಿ ಪೂರ್ವ ಮಂಡಳಿ, ಆಯುಷ್ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳು ಈಗಾಗಲೇ ಶೇ. 90ಕ್ಕಿಂತ ಹೆಚ್ಚು ನೋಂದಣಿ ಗುರಿಯನ್ನು ಯಶಸ್ವಿಯಾಗಿ ತಲುಪಿವೆ.
ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಡಿಸಿ/ಸಿಇಒಗಳು ದಿನನಿತ್ಯ ಈ ವ್ಯವಸ್ಥೆಯ ಡ್ಯಾಶ್ಬೋರ್ಡ್ ಅನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಕಚೇರಿ ಅವಧಿಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗದಿರುವ ಬಗ್ಗೆ ನಾಗರಿಕರು ನೀಡುವ ಪ್ರತಿಕ್ರಿಯೆ ಈ ಸುಶಾಸನದ ಗುರಿಯನ್ನು ತಲುಪಲು ಪ್ರಮುಖ ಪಾತ್ರ ವಹಿಸಲಿದೆ.
ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ



