This is the title of the web page
This is the title of the web page

ಲಾಡ್ಜ್ ನಲ್ಲಿ ವ್ಯಕ್ತಿ ನೇಣಿಗೆ ಶರಣು

ವಿಜಯಪುರ: ನಗರದ ಟೂರಿಸ್ಟ್ ಲಾಡ್ಜ್‍ನಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ನಾಗಪ್ಪ ಹಂಚಿನಾಳ (40) ನೇಣಿಗೆ ಶರಣಾದ ವ್ಯಕ್ತಿ. ಮೃತ ನಾಗಪ್ಪ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ.

ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.