ಬೆಂಗಳೂರು: ಕಾಶ್ಮೀರದ ರಜೋರಿ ಸೆಕ್ಟರ್ನಲ್ಲಿ ಉಗ್ರರೊಂದಿಗೆ ಹೋರಾಡುವ ವೇಳೆ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ನಡೆಸಲಾಗುವುದು.
ನಿನ್ನೆ ರಾತ್ರಿ ರಾಜ್ಯಕ್ಕೆ ಆಗಮಿಸಿದ ಹುತಾತ್ಮ ಪ್ರಾಂಜಲ್ ಪಾರ್ಥೀವ ಶರೀರಕ್ಕೆ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಜಿಗಣಿ ಬಳಿಯ ನಂದನವನ ಲೇಔಟ್ನಲ್ಲಿರುವ ಪ್ರಾಂಜಲ್ ನಿವಾಸದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ರಾಜ್ಯಪಾಲರು ಸೇರಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಡಿ.ಕೆ. ಸುರೇಶ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಾರ್ವಜನಿಕರು ಅಂತಿಮ ದರ್ಶನ ಪಡೆದರು.
11 ಗಂಟೆ ನಂತರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಹೊರಟು ಕೂಡ್ಲು ಗೇಟ್ ಬಳಿಯಿರುವ ಸೋಮುಸುಂದರ ಪಾಳ್ಯಂ ವಿದ್ಯುತ್ ಚಿತಗಾರದಲ್ಲಿ ಮಧ್ಯಾಹ್ನದ ವೇಳೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ನಂತರ ಅವರಿಗೆ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು.