ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪವನ್ನು ಸ್ವತಃ
ಬ್ರೆಜಿಲಿಯನ್ ಮಾಡೆಲ್ ಅಲ್ಲಗಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್ ರೂಪದರ್ಶಿ ೨೨ ಕಡೆ ಮತ ಚಲಾಯಿಸಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಆರೋಪದ ಬಗ್ಗೆ ಬ್ರೆಜಿಲ್ ಮಾಡೆಲ್ ಲಾರಿಸಾ ಪ್ರತಿಕ್ರಿಯೆ ನೀಡಿದ್ದಾರೆ. ಅವರು ನನ್ನ ಹಳೆಯ ಫೋಟೊ ಬಳಸಿ ಸೀಮಾ ಮತ್ತು ಸರಸ್ವತಿ ಎಂದು ಕರೆಯುತ್ತಿದ್ದಾರೆ. ನಾನು ಬ್ರೆಜಿಲಿಯನ್.. ಇದು ರಾಜಕೀಯ ನಾಟಕದಂತೆ ಕಾಣುತ್ತಿದೆ. ಮಾಧ್ಯಮಗಳು ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿವೆ ಎಂದು
ತಿಳಿಸಿದ್ದಾರೆ.
ಭಾರತದ ಚುನಾವಣೆಯಲ್ಲಿ ತನ್ನ ಹೆಸರು ಕೇಳಿಬಂದಿರುವುದಕ್ಕೆ ಲಾರಿಸಾಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಫೋಟೊ ನನ್ನ ಆರಂಭಿಕ ಮಾಡೆಲಿಂಗ್ ದಿನಗಳ ಹಳೆಯ ಸ್ಟಾಕ್ ಫೋಟೊ. ನಾನೀಗ ಮಾಡೆಲ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬAಧವಿಲ್ಲ. ನನ್ನ ಫೋಟೊವನ್ನು ಸ್ಟಾಕ್ ಇಮೇಜ್ ಪ್ಲಾಟ್ಫಾರ್ಮ್ನಿಂದ ಖರೀದಿಸಲಾಗಿದೆ. ನಾನು ಎಂದಿಗೂ ಭಾರತಕ್ಕೆ ಹೋಗಿಲ್ಲ. ನಾನು ಬ್ರೆಜಿಲಿಯನ್ ಡಿಜಿಟಲ್ ಇನ್ಫುö್ಲಯೆನ್ಸರ್ ಮತ್ತು ಕೇಶ ವಿನ್ಯಾಸಕಿ. ನಾನು ಭಾರತೀಯ ಜನರನ್ನು ಪ್ರೀತಿಸುತ್ತೇನೆ ಎಂದು ತಿಳಿಸಿದ್ದಾರೆ.



