ಬೆಂಗಳೂರು: ಹನುಮಕ್ಕ ಅಲಿಯಾಸ್ ಕರಿಯಮ್ಮ (೫೦) ಎಂಬ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆಯಲ್ಲಿ ಜರುಗಿದೆ. ಒಂದೇ ರೂಮಿನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರಲ್ಲಿ ಹನುಮಕ್ಕ ಮಹಿಳೆ ಮೂರು ದಿನದ ಹಿಂದೆ ಹತ್ಯೆಯಾಗಿರುವುದಾಗಿ ಅರಳು ಮಲ್ಲಿಗೆ ಗ್ರಾಮದ ವ್ಯಕ್ತಿಯೊಬ್ಬರು ದೂರು ನೀಡಿದ ಮೇಲೆ ದೊಡ್ಡಬಳ್ಳಾಪುರ ಗ್ರಾಮಾಂತರ…
ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಿರುತ್ತಾರೆ.
ಕೊಲೆಯಾದ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿರುತ್ತಾರೆ.



