This is the title of the web page
This is the title of the web page

ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಈಗ ಮ್ಯೂಸಿಯಂ..?

ಮೈಸೂರು: ಮೈಸೂರಿನ ಕಚೇರಿ ಹೃದಯ ಭಾಗದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಹಳೇ ಪಾರಂಪರಿಕ ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಚಿಂತನೆ ನಡೆಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಹಾಗೂ ಎಲ್ಲಾ ವಿಭಾಗಗಳನ್ನು ಸಿದ್ದಾರ್ಥನಗರದ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣಕ್ಕೆ ಸ್ಥಳಾಂತರಿಸಿರುವುದರಿಂದ ಖಾಲಿ ಇರುವ ಈ ಹಳೇ ಪಾರಂಪರಿಕ ಕಟ್ಟಡವನ್ನು ಮೈಸೂರಿನ ಕಂದಾಯ ಇಲಾಖೆ ಕಚೇರಿ ಕಡತಗಳು, ಐತಿಹಾಸಿಕ ಹಾಗೂ ರಾಜಪ್ರಭುತ್ವದ ಆಡಳಿತ, ಪಾರಂಪರಿಕ ಸ್ಮಾರಕಗಳ ಮಾಹಿತಿ ಸೇರಿದಂತೆ ಇನ್ನಿತರ ಅಪರೂಪದ ವಸ್ತುಗಳ ಸಂಗ್ರಹಾಲಯವನ್ನಾಗಿ ಪರಿವರ್ತಿಸಿ ಪ್ರವಾಸಿಗರು, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಹಿರಿಯರ ಸಲಹೆ, ಮಾರ್ಗದರ್ಶನ ಪಡೆದು ಹಳೇ ಡಿಸಿ ಕಚೇರಿ ಕಟ್ಟಡದ ಬಗ್ಗೆ ನಿರ್ಧರಿಸಲಾಗುವುದು. ಅಂತಿಮವಾಗಿ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೆಶನದಂತೆ ಕ್ರಮವಹಿಸುತ್ತೇವೆ ಎಂದು ತಿಳಿಸಿದರು.