ದೆಹಲಿ: ಕಾಕ್‍ಪಿಟ್‍ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಇಥಿಯೋಪಿಯನ್ ಏರ್‍ಲೈನ್ಸ್‍ನ ಬೋಯಿಂಗ್ 777-8 ಇಖಿ 687 ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ದೆಹಲಿಯಿಂದ ಅಡಿಸ್ ಅಬಾಬಾಗೆ ತೆರಳುತ್ತಿದ್ದು, ಕಾಕ್‍ಪಿಟ್‍ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿತು.
ವಿಮಾನ ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನದಲ್ಲಿದ್ದ ಪ್ರಯಾಣಿಕರು ತಿಳಿಸಿದ್ದಾರೆ.
ವಿಮಾನದ ಕಾಕ್‍ಪಿಟ್‍ನಿಂದ ಹೊಗೆ ಬಂದಿದ್ದರಿಂದ ಪ್ರಯಾಣಿಕರು ಭಯಭೀತರಾಗಿದ್ದು, ವಿಮಾನದಲ್ಲಿ 240ಕ್ಕೂ ಹೆಚ್ಚು ಮಂದಿ ಇದ್ದರು ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಿಮಾನದ ಕಾಕ್‍ಪಿಟ್‍ನಲ್ಲಿ ಹೊಗೆಯ ಘಟನೆಯ ಬಗ್ಗೆ ವಿಮಾನಯಾನ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Leave a Review