ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಹತ್ಯೆ ಪ್ರಕರಣವನ್ನು ಖಂಡಿಸಿ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಎಸ್ಟಿಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಪ್ರತಿಭಟನಾಕಾರರು ಮುಖ್ಯಮಂತ್ರಿಯವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಅಶೋಕ ಹೋಟೆಲ್ ಬಳಿಯೇ ಅವರನ್ನು ತಡೆದು ವಶಕ್ಕೆ ಪಡೆಯಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ನಿವಾಸ ಕಾವೇರಿಗೆ 3 ಕೆಎಸ್ಆರ್ಪಿ ತುಕಡಿ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.