ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿದ್ದ ಸಿಜೆ ರಾಯ್ ಅವರು ನಿನ್ನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆ ವೇಳೆ ವೈದ್ಯರು ಎದೆಯಲ್ಲಿದ್ದ ಒಂದು ಗುಂಡು ಹೊರತೆಗೆದಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ರಾಯ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು ಎದೆಗೆ ಹೊಕ್ಕಿದ್ದ ಒಂದು ಗುಂಡನ್ನು ವೈದ್ಯರು ಇದೀಗ ಹೊರಗಡೆ ತೆಗೆದಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಇದೀಗ ಅಂತ್ಯವಾಗಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಬೆಂಗಳೂರಿನ ಕೋರಮಂಗಲದಲ್ಲಿರುವ ಬಾಬು ಒಡೆತನದ ವೈಟ್ ಹೌಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಸಂಜೆ ಅಥವಾ ನಾಳೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.



