ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್ಟಿ ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ ನಂದಿನಿಯಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ.
ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು ೧೨% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು ೫%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಪನ್ನಿರ್ ಮತ್ತು ಯುಹೆಚ್ಟಿ ಹಾಲಿಗೆ(ಗುಡ್ ಲೈಫ್) ಮೊದಲು ೫% ರಷ್ಟು ಜಿಎಸ್ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ.
ಹಾಲು, ಮೊಸರು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿಗೆ ಜಿಎಸ್ಟಿ ಇಲ್ಲ, ಮೊಸರಿಗೆ ೫% ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದೆ. ಹೀಗಾಗಿ ಈ ಎರಡೂ ಉತ್ಪನ್ನಗಳ ಬೆಲೆ ಈಗಿನಂತೆ ಮುಂದುವರಿಯಲಿದೆ.
ಈಗಾಗಲೇ ಜಿಎಸ್ಟಿ ಕಡಿಮೆಯಾಗಿರುವ ಉತ್ಪನ್ನಗಳ ದರ ನಿಗಧಿ ಸಂಬAಧ ಕೆಎಂಎಫ್ ಕೆಲಸ ಶುರು ಮಾಡಿದ್ದು ಶೀಘ್ರವೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ.