ಆನೇಕಲ್: ಕನ್ನಡ ಭಾಷೆಯಲ್ಲಿ ಪ್ರಪ್ರಥಮ ಭಾರಿಗೆ ಐಎಎಸ್ ಪರೀಕ್ಷೆ ಬರೆದು ಪಾಸ್ ಮಾಡಿದ ದೇಶದ ಮೊದಲ ವ್ಯಕ್ತಿ ಕೆ. ಶಿವರಾಮು ಅವರ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಯ ಪರಿಕರಗಳನ್ನು ನೀಡುವ ಮೂಲಕ ಸಾಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಆಚರಿಸಲಾಯಿತು.
ನಂತರ ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ಮಾತನಾಡಿ ಸರ್ಕಾರಿ ಶಾಲೆಗಳು ಬಲವರ್ಧನೆ ಮತ್ತು ಅಭಿವೃದ್ಧಿಗೊಳ್ಳಬೇಕಾದರೆ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯ. ಹಾಗಾಗಿ ಸರ್ಕಾರಿ ಶಾಲಾ ಮಕ್ಕಳ ಪ್ರೋತ್ಸಾಹ ಸಲುವಾಗಿ ನೋಟ್ ಪುಸ್ತಕ ಹಾಗೂ ಕಲಿಕೆಯ ಪರಿಕರಗಳನ್ನು ವಿತರಣೆ ಮಾಡುತ್ತಿರುವುದು ಶ್ಲಾಘನೀಯ.
ಕಲೆ, ಸಾಹಿತ್ಯ, ರಾಜಕೀಯ ವ್ಯಕ್ತಿಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇತಿಹಾಸಕಾರರ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕನ್ನಡ ಭಾಷೆಯಲ್ಲಿ ಪ್ರಥಮ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಪಾಸ್ ಮಾಡಿದ ಮೊದಲ ಕನ್ನಡಿಗ. ಅವರು ಮಕ್ಕಳಿಗೆ ಸ್ಫೂರ್ತಿ ಹಾಗಾಗಿ ಅವರಂತೆ ಗ್ರಾಮೀಣ ವಿದ್ಯಾರ್ಥಿಗಳು ಸಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಐಎಎಸ್ ಮತ್ತು ಕೆಎಎಸ್ ಅಂತಹ ಅಧಿಕಾರಿಗಳಾಗಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಮಾದರಿ ಆಗಬೇಕು ಎಂದು ಕರೆ ನೀಡಿದರು.
ಛಲವಾದಿ ಮಹಾಸಭಾದ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಚೌಡಪ್ಪ ಮಾತನಾಡಿ, ಹುಟ್ಟುಹಬ್ಬವನ್ನು ಆಡಂಬರ ಅದ್ಧೂರಿಗಳನ್ನು ಮಾಡದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸುವುದು ಮುಖ್ಯವಾಗಿದೆ. ಹಾಗಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಶೈಕ್ಷಣಿಕ ಪರಿಕರಗಳು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸಿಪಾನಿ ವೃದ್ಧಾಶ್ರಮದಲ್ಲಿ ಅನ್ನ ದಾಸೋಹ ಹಾಗೂ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ನೀಡುವ ಮೂಲಕ ಛಲವಾದಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷರಾದ ಕೆ. ಶಿವರಾಮು ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮುಂಬರುವ ದಿನಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದರು,
ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷರಾದ ಕೆ. ಶಿವಣ್ಣ ಮಾತನಾಡಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮು ರವರ ಅಭಿಮಾನಿಗಳ ಬಳಗವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಯ ಪರಿಕರಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವುದು ಅವಶ್ಯಕವಾಗಿದೆ ಎಂದರು.
ಛಲವಾದಿ ಮಹಾಸಭಾದ ನಿರ್ದೇಶಕ ಮಹಾದೇವಯ್ಯ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಓದಿ ಭಾರತದಲ್ಲೇ ಮೊದಲ ಬಾರಿಗೆ ಕನ್ನಡ ಭಾಷೆಯಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸ್ ಮಾಡಿದ ಮೊದಲ ಕನ್ನಡಿಗ. ಐಎಎಸ್ ಅಧಿಕಾರಿಯಾಗಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ಆನೇಕ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನರ ವಿಶ್ವಾಸವನ್ನು ಗಳಿಸಿದ ಅಧಿಕಾರಿ ಆಗಿದ್ದರು. ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ಸ್ಫೂರ್ತಿ ತುಂಬುವ ನಿಟ್ಟಿನಲ್ಲಿ ಉನ್ನತ ಸ್ಥಾನಕ್ಕೆ ಏರಿದ ಮೊದಲ ಕನ್ನಡಿಗರ ಮಾಹಿತಿಯನ್ನು ನೋಟ್ ಪುಸ್ತಕಗಳನ್ನು ವಿತರಿಸಲಾಗಿದೆ. ಕೆ. ಶಿವರಾಮು ಅವರು ಇಂದಿನ ಯುವ ಜನತೆ ಮಾದರಿ ಆಗಿದ್ದಾರೆ ಎಂದರು.
ಛಲವಾದಿ ಮಹಾಸಭಾದ ಜಿಲ್ಲಾ ಖಜಾಂಚಿ ವೇಣು ಮಾತನಾಡಿ ಕನ್ನಡ ಭಾಷೆಯಲ್ಲಿ ಐಎಎಸ್ ಪಾಸ್ ಮಾಡಿದ ಮೊದಲ ವ್ಯಕ್ತಿ ಕೆ. ಶಿವರಾಮು. ಇಂತಹ ವ್ಯಕ್ತಿಗಳು ಇಂದಿನ ಯುವ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ಹಾಗಾಗಿ ಇವರ ಸಾಧನೆ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಕೆ. ಶಿವರಾಮು ಅವರ ಹುಟ್ಟುಹಬ್ಬದ ಅಂಗವಾಗಿ ಬ್ಯಾಗಡದೇನಹಳ್ಳಿ, ಬನಹಳ್ಳಿ ಮತ್ತು ಮುತ್ತಗಟ್ಟಿ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳು ನೀಡಿದರು. ಹಾಗೂ ಸಿಪಾನಿ ವೃದ್ಧಾಶ್ರಮದಲ್ಲಿ ಅನ್ನ ದಾಸೋಹ ಮಾಡುವ ಮೂಲಕ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಬ್ಯಾಗಡದೇನಹಳ್ಳಿ ಗ್ರಾಮಪಂಚಾಯಿತಿ ಮಾಜಿ ಉಪಾಧ್ಯಕ್ಷ ರತ್ನಮ್ಮ ರಾಜಪ್ಪ, ಮುಖಂಡರಾದ ಅನಿಲ್ ರೆಡ್ಡಿ, ನಾಗೇಶ್, ಕೂಗೂರು ಬಸವರಾಜು, ಜಿಲ್ಲಾ ಛಲವಾದಿ ಮಹಾಪೋಷಕರಾದ ಬಳ್ಳೂರು ಮುನಿವೀರಪ್ಪ, ಜಿಲ್ಲಾಧ್ಯಕ್ಷ ಚೌಡಪ್ಪ, ಜಿಲ್ಲಾ ಖಜಾಂಚಿ ವೇಣು, ಪ್ರಧಾನ ಕಾರ್ಯದರ್ಶಿ ಸುದರ್ಶನ್, ತಾಲ್ಲೂಕು ಅಧ್ಯಕ್ಷ ಎಸ್ ಟಿಡಿ ರಮೇಶ್, ಉಪಾಧ್ಯಕ್ಷ ಬಳ್ಳೂರು ಮುನಿಯಪ್ಪ, ಮುಖಂಡರಾದ ಮುರುಗೇಶ್, ನಂಜಪ್ಪ, ಕೆ. ಶಿವರಾಮು ಅಭಿಮಾನಿ ಬಳಗದ ಚಂದ್ರಶೇಖರ್, ಬೆಟ್ಟಪ್ಪ, ಸೋಮಣ್ಣ ಹಾಜರಿದ್ದರು.