ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ, ಶಿಕ್ಷಕರು ಹಾಗೂ ಪೋಷಕರ ಪಾತ್ರ ಮಹತ್ತರವಾದದ್ದು, ಅದನ್ನು ಚಾಚೂ ತಪ್ಪದೇ ಮಾಡಿದಾಗ, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಹೇಳಿದರು.
ಪಟ್ಟಣದ ಸರಕಾರಿ ಮಾದರಿ ಹೆಣ್ಣು ಮಕ್ಕಳ ಪಾಠಶಾಲೆಯಲ್ಲಿ ಆಯೋಜಿಸಿದ್ದ, ಶಾರದಾ ಪೂಜೆ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ, ಅವರು ಮಾತನಾಡಿದರು.
ಸರಕಾರ, ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಮಕ್ಕಳು, ಸದುಪಯೋಗ ಮಾಡಿಕೊಳ್ಳಬೇಕು. ಪೋಷಕರೂ ಸಹಾ ಮಕ್ಕಳ ಪ್ರಗತಿಗೆ ಹೆಚ್ಚಿನ ಸಹಕಾರ ನೀಡಬೇಕು. ಇಲಾಖೆಯಿಂದ ನೀಡುವಂತಹ ಎಲ್ಲಾ ನಿರ್ದೇಶನಗಳನ್ನು ಶಿಕ್ಷಕರು ಕಡ್ಡಾಯವಾಗಿ ಪಾಲಿಸಿಕೊಂಡು, ಮಕ್ಕಳ ಶ್ರೇಯೋಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರಾಧ ಮಾತನಾಡಿ, ಹೆಣ್ಣು ಮಕ್ಕಳ ಶಾಲೆಯಾಗಿರುವ ಕಾರಣ, ಪೊಷಕರು ಮಕ್ಕಳ ಕಡೆಗೆ ಹೆಚ್ಚಿನ ಗಮನ ಕೇಂದ್ರೀಕರಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರೊಂದಿಗೆ ಸಮಾಲೋಚನೆ ಮಾಡಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆಗಳನ್ನು ಗಮನಿಸುತ್ತಿದ್ದೇವೆ. ಆದ್ದರಿಂದ ತುಂಬಾ ಎಚ್ಚರಿಕೆಯಿಂದ ಮಕ್ಕಳನ್ನು ನೋಡಿಕೊಳ್ಳಬೇಕು ಎಂದರು.
ಪುರಸಭೆ ಸದಸ್ಯೆ ಶಿಲ್ಪಾಅಜಿತ್ ಅವರು ಮಾತನಾಡಿ, ಶಿಕ್ಷಣದಿಂದ ಮಾತ್ರವೇ, ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯೆ ಯಾರೂ ಕದಿಯಲಾರದಂತಹ ಒಂದು ದೊಡ್ಡ ಆಸ್ತಿಯಾಗಿದ್ದು, ಅದನ್ನು ಗಳಿಸಿಕೊಳ್ಳಲು ಹಣಕ್ಕಿಂತ ಜ್ಞಾನವನ್ನು ಸಂಪಾದನೆ ಮಾಡಿಕೊಳ್ಳಬೇಕು. ಇದಕ್ಕೆ ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದರು. ಶಾಲೆಯಲ್ಲಿ ಶಾರದಾ ಪೂಜೆಯನ್ನು ಆಯೋಜನೆ ಮಾಡಲಾಗಿತ್ತು. ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.
ಶಾಲೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಬಹುಮಾನಗಳು ವಿತರಣೆ ಮಾಡಿದರು. ವಿದ್ಯಾರ್ಥಿಗಳ ಸಾಧನೆಗೆ ಆರ್ಥಿಕವಾಗಿ ಪ್ರೋತ್ಸಾಹ ನೀಡಿದ ಶಿಕ್ಷಕ ಶ್ರೀನಿವಾಸ್ ಅವರನ್ನು ಸನ್ಮಾನಿಸಿದರು. ಶಾಲೆಗೆ ಅತಿಥಿ ಶಿಕ್ಷಕರನ್ನು ಪೂರೈಕೆ ಮಾಡಿರುವ ಅಂತರಾಷ್ಟಿçÃಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಕೇಶವಮೂರ್ತಿ ಅವರನ್ನು ಅಭಿನಂದಿಸಿದರು.
ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀನಿವಾಸ್, ಮುಖ್ಯಶಿಕ್ಷಕ ಮನೋಹರ್, ಸಹಶಿಕ್ಷಕರಾದ ನಿರ್ಮಲ, ಶಕುಂತಲ, ನಾಗಮಣಿ, ದ್ರಾಕ್ಷಾಯಿಣಿ, ಸರಸ್ವತಿ, ರಾಜೇಶ್ವರಿ.ಸೀಮಾ, ಮಮತಾ, ರೋಹಿಣಿ, ಶೋಭಾ, ಮಾಧವಿ, ರಾಜೇಶ್ವರಿ, ಅನ್ನಪೂರ್ಣಶ್ವರಿ, ಮೀನಾಕ್ಷಿ, ಮಾಧವಿ, ಜ್ಯೋತಿ, ಮುನಿರತ್ನಮ್ಮ, ಮಮತ, ನೇತ್ರಾವತಿ, ಹರೀಶ್, ಚಂದ್ರಶೇಖರ್, ತೇಜಸ್ವಿನಿ, ಶಾಜೀಯಾ, ರಂಜಿತಾ, ಶ್ರೀನಿವಾಸ್, ಮುಂತಾದವರು ಹಾಜರಿದ್ದರು.



