ಬೆಂಗಳೂರು: “ಸಿಎಂ ಆಗುವ ಕಾಲ ಹತ್ತಿರ ಬಂದಿದೆಎAದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಲಾಲ್ ಬಾಗ್ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿತೋರಿಸಬೇಡಿ”. “ನಾನು ಸಿಎಂ ಹುದ್ದೆಅಲಂಕರಿಸಲುಆತುರದಲ್ಲಿಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲುಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿತಿರುಗುತ್ತಿದ್ದೇನೆ. ನೀವು ಇದೇರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂಇಲ್ಲ” ಎಂದು ತಿಳಿಸಿದರು.
“ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರಅಗತ್ಯವೂ ನನಗೆ ಇಲ್ಲ. ನನಗೆ ನನ್ನಗುರಿಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋಕೊಡಲಿ. ರಾಜ್ಯದಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ” ಎಂದು ಹೇಳಿದರು.
“ಇದೇರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ” ಎಂದೂ ತಿಳಿಸಿದರು.
`ಮಳೆ ವೇಳೆ ರಸ್ತೆಗೆಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ’
“ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದುತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಮುಂಜಾನೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಅವರು ಪ್ರತಿಕ್ರಿಯಿಸಿದರು. ಮಾರತ್ ಹಳ್ಳಿ ಬಳಿ ಮಳೆಯಲ್ಲೇ ಡಾಂಬರು ಹಾಕುತ್ತಿದ್ದ ಬಗ್ಗೆ ಕೇಳಿದಾಗ, “ನಗರದಾದ್ಯಂತರಾತ್ರಿಯೆಲ್ಲಾಜೋರಾಗಿ ಮಳೆ ಸುರಿದಿದೆ.
ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ ಸುದ್ದಿಗಳು ವರದಿಯಾಗಿಲ್ಲ. ಒಂದಷ್ಟುಕಡೆ ಮಾತ್ರ ನೀರಿನ ಹರಿವಿಗೆಅಡಚಣೆಉಂಟಾಗಿದೆ” ಎಂದರು. ಒಂದು ವಾರಗಳ ಹಿಂದೆ ಮುಚ್ಚಿದ್ದ ರಸ್ತೆಗುಂಡಿಗಳು ಮಳೆಗೆ ಮತ್ತೆ ಹಾಳಾಗಿರುವ ಬಗ್ಗೆ ಕೇಳಿದಾಗ, “ಮಳೆ ಬಂದಾಗ ಈ ರೀತಿತೊಂದರೆಯಾಗುತ್ತದೆ, ಸಮಸ್ಯೆ ಬಗೆ ಹರಿಸಲಾಗುವುದು” ಎಂದರು.