ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಮರುಪ್ರತಿಷ್ಠಾಪನೆ ಮಾಡಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ, ಬೋಸ್ ಅವರ ಜನ್ಮ ದಿನದ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ವಂದಿಸಿದರು. ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.



