ಕೆ.ವಿ. ಸತ್ಯಪ್ರಕಾಶ್ – ಹೇಮಂತ್  ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್  ಅಭಿನಯದ ‘ಲ್ಯಾಂಡ್ ಲಾರ್ಡ್’
ಚಿತ್ರದ ಸರ್ವೆÊವರ್ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕವನ್ನೂ(ಜನವರಿ ೨೩) ಘೋಷಣೆ ಮಾಡಲಾಗಿದೆ. ಜನವರಿ ೨೦ ದುನಿಯಾ ವಿಜಯ್ ಅವರ ಹುಟ್ಟುಹಬ್ಬ ಕೂಡಾ. ನಾಯಕ ದುನಿಯಾ ವಿಜಯ್ ಮಾತನಾಡಿ ಕಷ್ಟದ ಸಮಯದಲ್ಲಿ ಕೈ ಹಿಡಿದ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದರು. ಇನ್ನೂ, ನಾನು ಹಾಗೂ ರಚಿತರಾಮ್ ಅವರು ಒಂದೇ ಬಡಾವಣೆಯವರು. ಮೊದಲಿನಿಂದಲೂ ಸ್ನೇಹಿತರು. ಅವರ ಜೊತೆಗೆ ಅಭಿನಯಿಸಿದ್ದು ಹಾಗೂ ತೆರೆಯ ಮೇಲೆ ಅಷ್ಟೇ ಅಲ್ಲ.
ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ತಂತ್ರಜ್ಞರ ಕಾರ್ಯವೈಖರಿಯೂ ಚೆನ್ನಾಗಿದೆ. ಚಿತ್ರ ಮೆಚ್ಚುಗೆಯಾಗುವ ಭರವಸೆಯಿದೆ ಎಂದರು.
ರಚಿತಾರಾಮ್ ಮಾತನಾಡುತ್ತಾ, ನಾನು ಈ ಚಿತ್ರದ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತು. ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊAಡೆ. ಕಥೆ ಕೇಳಿದ ಮೇಲೆ ನಾನು ದರ್ಶನ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ. ಅವರು ಕೂಡ ಕಥೆ ಚೆನ್ನಾಗಿದೆ ಎಂದರು. “ಜಾನಿ ಜಾನಿ ಎಸ್ ಪಪ್ಪ” ಚಿತ್ರದ ನಂತರ ನಾನು ದುನಿಯಾ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ. ಈ ಚಿತ್ರತಂಡದೊಟ್ಟಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ನಿಂಗವ್ವ ನನ್ನ ಪಾತ್ರದ ಹೆಸರು. ಟೀಸರ್ ಚೆನ್ನಾಗಿದೆ ಎಂದರು. ಇದೊAದು ೮೦ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ. ೪೫ ವರ್ಷಗಳ ಹಿಂದಿನದ್ದನ್ನು ತೆರೆಯ ಮೇಲೆ ತರುವುದು ಅಷ್ಟು ಸುಲಭವಲ್ಲ. ನಾವು ಅಂದುಕೊAಡ ಹಾಗೆ ಚಿತ್ರ ಬಂದಿದೆ
ಅAದರೆ ಅದಕ್ಕೆ ಚಿತ್ರತಂಡದ ಸಹಕಾರವೇ ಕಾರಣ.
ಇನ್ನೂ ದುನಿಯಾ ವಿಜಯ್ ಅವರ ಅಭಿನಯಕ್ಕೆ ಅಭಿಮಾನಿ ನಾನು. ರಚಿತಾರಾಮ್ ಅವರು  ಅಭಿನಯಿಸಲು ಸೆಟ್ ಗೆ ಬಂದರೆ ಅವರ ಸಂಭಾಷಣೆಗೆ ವಿಷಲ್ ಬೀಳುತ್ತಿತ್ತು. ರಿತನ್ಯ, ಶಿಶಿರ್, ರಾಕೇಶ್ ಅಡಿಗ,ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಎಲ್ಲರ ಅಭಿನಯವೂ ಬಹಳ ಚೆನ್ನಾಗಿದೆ. ಐವತ್ತಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಈ
ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಚೆನ್ನಾಗಿ ಬಂದಿದೆ. ಅದರಲ್ಲೂ ಯೋಗರಾಜ್ ಭಟ್ ಅವರು ಬರೆದು ದುನಿಯಾ ವಿಜಯ್ ಹಾಗೂ ರಚಿತರಾಮ್  ಅವರು ಅಭಿನಯಿಸಿರುವ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಅದು ಹಿಟ್ ಹಾಡುಗಳ ಸಾಲಿಗೆಸೇರಲಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ
ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಎಂದರು ನಿರ್ದೇಶಕ ಜಡೇಶ್ ಕೆ. ಹಂಪಿ. ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದುನಿಯಾ ವಿಜಯ್ ತೆರೆ ಮೇಲೆ
ಮಾತ್ರ ನನ್ನ ಮಗ ಅಲ್ಲ. ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆರೀತಿಯ ಪ್ರೀತಿ ತೋರಿಸುತ್ತಾರೆ ಎಂದು ಹಿರಿಯ ನಟಿ ಉಮಾಶ್ರೀ ಹೇಳಿದರು.


		
		
		
		