ಚೇತನ್ ಹಾಗೂ ರಕ್ಷ್ ರಾಮ್ ಜೋಡಿ ಬರ್ಮ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ಗಟ್ಟಿಮೇಳ ಸೀರಿಯಲ್ ಮೂಲಕ ಕರುನಾಡ ಮನ-ಮನೆ ಗೆದ್ದಿರುವ ರಕ್ಷ್ ರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿ ಇದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಬರ್ಮ ಚಿತ್ರತಂಡ ಹೊಸ ಪೋಸ್ಟರ್ ಉಡುಗೊರೆಯಾಗಿ ನೀಡಿದೆ. ರಕ್ಷ್ ಬರ್ತ್ ಡೇ ಅಂಗವಾಗಿ ಅವರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ಬರ್ಮ ನಯಾ ಲುಕ್ ಅನಾವರಣ ಮಾಡಿ ಚಿತ್ರತಂಡ ಶುಭಾಶಯ ಕೋರಿದೆ.
ಬರ್ಮ ಹೊಸ ಪೋಸ್ಟರ್ ಸಖತ್ ಇಂಪ್ರೆಸಿವ್ ಆಗಿದೆ. ಕೈಯಲ್ಲಿ ಕೊಡಲಿ ಹಿಡಿದು, ರಕ್ತಸಿಕ್ತ ಅವತಾರದಲ್ಲಿ ಮಾಸ್ ಗೆಟಪ್ ನಲ್ಲಿ ರಕ್ಷ್ ರಾಮ್ ಪ್ರತ್ಯಕ್ಷರಾಗಿದ್ದಾರೆ. ಅಂದಹಾಗೇ ಬರ್ಮ ಪಕ್ಕಾ ಆಕ್ಷನ್ ಎಂಟರ್ಟೈನರ್ ಸಿನಿಮಾ. ಈ ಸಿನಿಮಾ ಮೂಲಕ ಕಿರುತೆರೆ ನಟ ರಕ್ಷ್ ಪ್ಯಾನ್ ಇಂಡಿಯಾ ಸ್ಟಾರ್ ಎಮರ್ಜ್ ಆಗಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹೆಚ್ಚಿರುವ ರಕ್ಷ್ ರಾಮ್, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ.
ತಮ್ಮದೇ ನಿರ್ಮಾಣ ಸಂಸ್ಥೆ ಶ್ರೀ ಸಾಯಿ ಆಂಜನೇಯ ಕಂಪನಿಯಡಿ ಬರ್ಮ ಸಿನಿಮಾಗೆ ಹಣ ಹಾಕಿದ್ದಾರೆ. ಚೇತನ್ ಕುಮಾರ್ ನಿರ್ದೇಶಿಸುತ್ತಿರುವ ‘ಬರ್ಮ’ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ಬಹದ್ದೂರ್’ ಹಾಗೂ ‘ಭರ್ಜರಿ’ ಸಿನಿಮಾದಲ್ಲಿ ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಬರ್ಮ ಮೂಲಕ ಮೂರನೇ ಬಾರಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.
‘ಜೇಮ್ಸ್’ ಹೊರತುಪಡಿಸಿ ಚೇತನ್ ಕುಮಾರ್ ನಿರ್ದೇಶಿಸಿದ ಅಷ್ಟೂ ಸಿನಿಮಾಗಳೂ ‘ಬ’ ಇಲ್ಲವೇ ‘ಭ’ದಿಂದಲೇ ಆರಂಭ ಆಗಿರುವುದು ವಿಶೇಷ. ಇವರು ನಿರ್ದೇಶಿಸಿರುವ ಜೇಮ್ಸ್ ಸೇರಿದಂತೆ ‘ಬಹದ್ದೂರ್’, ‘ಭರ್ಜರಿ’ ಹಾಗೂ ‘ಭರಾಟೆ’ ಸಿನಿಮಾ ಬಾಕ್ಸಾಫೀಸ್ನಲ್ಲಿ ಹಿಟ್ ಲಿಸ್ಟ್ ಸೇರಿವೆ. ಈಗ ಹೊಸ ಸಿನಿಮಾ ‘ಬರ್ಮ’ ಅಂತ ಟೈಟಲ್ ಇಟ್ಟಿದ್ದಾರೆ. ಈ ಮೂಲಕ ಮತ್ತೆ ಯಶಸ್ಸನ್ನು ಹುಡುಕಿ ಹೊರಟಿದ್ದಾರೆ ಚೇತನ್.