ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಾ÷್ಯಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ೨ ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (೨೩), ಲಕ್ಷಿ÷್ಮÃ ಚಿಮರಡಿ (೨೭), ರೇಖಾ ಭೋಕೆ ಮೃತ ದುರ್ದೈವಿಗಳು.
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ಪುಟ್ಟ ಮಗು ಹಾಗೂ ಮೂವರು ದೊಡ್ಡವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



