ಹಾಸನ: ಗಣೇಶ ವಿಸರ್ಜನೆ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್ ವಿದ್ಯಾರ್ಥಿಗಳು ಸೇರಿ ೯ ಜನರನ್ನು ಬಲಿ ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ ಭೀಕರ ಅಂತ್ಯವಾಗಿದೆ. ಮಕ್ಕಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಹೃದಯ ವಿಧ್ರಾವಕ ಘಟನೆಯಿಂದ ಇಡೀ ಜಿಲ್ಲೆಯೇ ಶೋಕ ಸಾಗರದಲ್ಲಿ ಮುಳುಗಿದೆ.
ಹಬ್ಬದ ವಾತಾವರಣವಿದ್ದ ಗ್ರಾಮ ಕ್ಷಣಾರ್ಧದಲ್ಲಿ ದುರಂತವಾಗಿ ಪರಿವರ್ತನೆಯಾಗಿರುವುದು ದುರ್ದೈವ. ಇಡೀ ಗ್ರಾಮವೇ ರಾತ್ರಿಯಿಡೀ ಜಾಗರಣೆ ಮಾಡಿದೆ. ಯುವಕರು ದುರಂತ ಅಂತ್ಯ ಕಂಡಿರುವುದಕ್ಕೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಮೃತಪಟ್ಟವರ ಪೈಕಿ ೬ ಮಂದಿ ಸ್ಥಳೀಯ ನಿವಾಸಿಗಳು. ಉಳಿದ ಮೂವರು ಬಳ್ಳಾರಿ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯವರು ಎಂದು ಗುರುತಿಸಲಾಗಿದೆ.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂಬತ್ತು ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ, ಇಂದು ಮುಂಜಾನೆ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಗ್ಯ ಕೇಂದ್ರದ ಬಳಿ ಜಮಾಯಿಸಿದ ಮೃತರ ಪೋಷಕರು, ಸಂಬAಧಿಕರು, ಸ್ನೇಹಿತರ ಗೋಳಾಟ ಕರಳು ಕಿವುಚುವಂತಿತ್ತು.
ಬಳ್ಳಾರಿಯ ಪ್ರವೀಣ್ ಕುಮಾರ್, ಹೊಳೇನರಸೀಪುರ ತಾಲ್ಲೂಕಿನ ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ (೧೭), ಹಳೇ ಕೋಟೆ ಹೋಬಳಿಯ ಕಬ್ಬಿನಹಳ್ಳಿ ಗ್ರಾಮದ ಕುಮಾರ (೨೫), ಪ್ರವೀಣ್, (೨೫), ಕೆ.ಬಿ.ಪಾಳ್ಯದ ರಾಜೇಶ (೧೭), ಮುತ್ತಿಗೆ ಹೀರಳ್ಳಿ ಗ್ರಾಮದ ಗೋಕುಲ (೧೭), ಹಾಸನದ ಬಂಟರಹಳ್ಳಿಯ ಪ್ರಭಾಕರ್ (೫೫), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗವಿಗಂಗಾಪುರ ಗ್ರಾಮದ ಮಿಥುನ್ (೨೩) ಹಾಗೂ ಚಿಕ್ಕಮಗಳೂರು ಜಿಲ್ಲೆ ಮಣೆನಹಳ್ಳಿ ಮಲ್ಲೆ ಗ್ರಾಮದ ಸುರೇಶ ಮೃತ ದುರ್ದೈವಿಗಳು.
ಮೃತರ ಪೈಕಿ ಐದು ಮಂದಿ ಎಂಜಿನಿಯರಿAಗ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇವರು ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ಐಜಿಪಿ ಬೋರಲಿಂಗಯ್ಯ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.ಅಪಘಾತದಲ್ಲಿ ಗಾಯಗೊಂಡಿರುವ ೨೦ಕ್ಕೂ ಹೆಚ್ಚು ಮಂದಿಯನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಇನ್ನು ಕೆಲವು ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡಿರುವ ೧೯ ಮಂದಿ ಪೈಕಿ ಇಬ್ಬರ ಸ್ಥಿತಿ ಸ್ಥಿರವಾಗಿದೆ. ಇಬ್ಬರು ಗಾಯಾಳುಗಳಿಗೆ ಪಕ್ಕೆಲುಬು ಮೂಳೆ ಮುರಿತವಾಗಿದ್ದರಿಂದ ಅವರನ್ನು ತುರ್ತು ಶಸ್ತç ಚಿಕಿತ್ಸೆಗೊಳಪಡಿಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ನಿವಾಸಿ ಮಿಥುನ್ ರಾತ್ರಿಯಷ್ಟೇ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ನಂತರ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡು ದುರಂತ ಅಂತ್ಯವಾಗಿರುವುದು ವಿಷಾದಕರ.
ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ಹಬ್ಬದ ವಾತಾವರಣವಿತ್ತು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಗ್ರಾಮಸ್ಥರು ಮಧ್ಯಾಹ್ನ ಮೆರವಣಿಗೆ ಆರಂಭಿಸಿದ್ದರು. ಡಿಜೆ ಸಂಗೀತದೊAದಿಗೆ ನೃತ್ಯ ಮಾಡಿಕೊಂಡು ಮೆರವಣಿಗೆ ತೆರಳುತ್ತಿದ್ದು, ಮೊಸಳೆಹೊಸಳ್ಳಿಯ ಸಂತೆ ಮಾಳದಲ್ಲಿ ಸಂಗೀತ ರಸಸಂಜೆ ಆಯೋಜಿಸಲಾಗಿತ್ತು. ಗಣೇಶೋತ್ಸವದ ಮೆರವಣಿಗೆ ಇನ್ನು ೫ ನಿಮಿಷಗಳ ಕಾಲ ಮುಂದೆ ಹೋಗಿದ್ದರೆ ಸಂತೆಮಾಳ ಸೇರಿಕೊಳ್ಳುತ್ತಿತ್ತು. ಅಷ್ಟರಲ್ಲಿ ದುರ್ಘಟನೆ ಸಂಭವಿಸಿದೆ.
ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಮೆರವಣಿಗೆಯಲ್ಲಿ ಭಕ್ತಿಭಾವದಿಂದ ಪಾಲ್ಗೊಂಡಿದ್ದರು. ರಾತ್ರಿ ೮.೩೦ರ ಸುಮಾರಿನಲ್ಲಿ ಈ ಮೆರವಣಿಗೆ ಮೈಸೂರು ಮಾರ್ಗದ ರಾಷ್ಟಿçÃಯ ಹೆದ್ದಾರಿ ೩೭೩ರಲ್ಲಿ ಸರಕು ಸಾಗಾಣಿಕೆಯ ಕಂಟೈನರ್ ಬೈಕ್ಗೆ ಗುದ್ದಿ, ಬಲಭಾಗಕ್ಕೆ ತಿರುಗಿ ಡಿವೈಡರ್ನ್ನು ಹತ್ತಿ ಪಕ್ಕದ ರಸ್ತೆಯಲ್ಲಿದ್ದ ಮೆರವಣಿಗೆಯ ಮೇಲೆ ಹರಿದಿದೆ. ಇದರಿಂದ ೫ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ೨೦ ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಮನೆಗೆ ಆಧಾರವಾಗಿದ್ದ ಯುವಕರು ದುರಂತ ಅಂತ್ಯ
ಹಾಸನ ಗಣೇಶ ವಿಸರ್ಜನೆ ವೇಳೆಟ್ರಕ್ ಅಪಘಾತ ಪ್ರಕರಣ | ಗ್ರಾಮದಲ್ಲಿ ನೀರವ ಮೌನ
