ಬಹು ನಿರೀಕ್ಷಿತ ಈ ಚಿತ್ರ ಮೇ 3 ರಂದು ಬಿಡುಗಡೆಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚೆನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ನಿರ್ಮಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಕಾಂಗರೂ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.
ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 3 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.ನಿರ್ಮಾಪಕರೇ ನಮ್ಮ ಅನ್ನದಾತರು. ಹಾಗಾಗಿ ಅವರಿಂದಲೇ ಟ್ರೇಲರ್ ರಿಲೀಸ್ ಮಾಡಿಸಬೇಕೆಂದು ನಾನು ಹಾಗೂ ನಿರ್ದೇಶಕರು ಅಂದುಕೊಂಡೆವು. ಈ ಚಿತ್ರದ ನಿರ್ಮಾಪಕರೆ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಚಿತ್ರದಲ್ಲಿ ಹಾರರ್ ಇದೆ, ಸಸ್ಪೆನ್ಸ್ ಇದೆ, ಥ್ರಿಲ್ಲರ್ ಇದೆ, ಎಲ್ಲಕ್ಕಿಂತ ಹೆಚ್ಚಾಗಿ ತಾಯಿ ಹೃದಯದ ಮಮತ.